ವಿಕ್ಕಿ
ರಾಜ್ಯ
ರಸ್ತೆ ಬದಿ ಆಟವಾಡುತ್ತಿದ್ದಾಗ ಘೋರ ದುರಂತ: ಕಸದ ವಾಹನ ಹರಿದು 3 ವರ್ಷದ ಕಂದಮ್ಮ ಸಾವು
ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ ಟಾಟಾ ಏಸ್ ವಾಹನ ಹರಿದು ಶೈಲಜಾ- ಸಮರ ದಂಪತಿ ಪುತ್ರ ವಿಕ್ಕಿ (3) ಮೃತಪಟ್ಟಿದ್ದಾನೆ. ಬೆಳಗ್ಗೆ ಬಾಪುಜಿ ನಗರದಲ್ಲಿ ಕಸ ಸಂಗ್ರಹಿಸಲು ವಾಹನ ಬಂದಿತ್ತು.
ಬಳ್ಳಾರಿ: ರಸ್ತೆಬದಿ ಆಟ ಆಡುತ್ತಿದ್ದ ವೇಳೆ ಘೋರ ದುರಂತ ಸಂಭವಿಸಿದ್ದು, ಕಸದ ವಾಹನ ಹರಿದು 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದಿದೆ.
ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ ಟಾಟಾ ಏಸ್ ವಾಹನ ಹರಿದು ಶೈಲಜಾ- ಸಮರ ದಂಪತಿ ಪುತ್ರ ವಿಕ್ಕಿ (3) ಮೃತಪಟ್ಟಿದ್ದಾನೆ. ಬೆಳಗ್ಗೆ ಬಾಪುಜಿ ನಗರದಲ್ಲಿ ಕಸ ಸಂಗ್ರಹಿಸಲು ವಾಹನ ಬಂದಿತ್ತು.
ಈ ವೇಳೆ, ರಸ್ತೆ ಬದಿ ಆಟ ಆಡುತ್ತಿದ್ದ ವಿಕ್ಕಿ ತಲೆ ಮೇಲೆ ವಾಹನ ಹರಿದಿದೆ. ಕೂಡಲೇ ಮಗುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆಸ್ಪತ್ರೆ ಮುಟ್ಟುವುದರಲ್ಲೇ ವಿಕ್ಕಿ ಸಾವನ್ನಪ್ಪಿದ್ದಾನೆ
ಮಗುವನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇನ್ನೂ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಂದ ಮಗು ಬಲಿಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ