'I am going to blast India from Pakistan': ಅಪಾರ್ಟ್ಮೆಂಟ್​ ಗೋಡೆ ಮೇಲೆ ದೇಶ ವಿರೋಧಿ ಬರಹ ಪತ್ತೆ

ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್‌ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಲಾಗಿದೆ.
scribbled on wall
ಗೋಡೆ ಮೇಲೆ ದೇಶ ವಿರೋಧಿ ಬರಹ
Updated on

ಬೆಂಗಳೂರು: ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆಂಬ ಗೋಡೆ ಬರಹವೊಂದು ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್‌ನ ಗೋಡೆ ಮೇಲೆ ಬುಧವಾರ ಕಂಡು ಬಂದಿದ್ದು, ಈ ಬೆಳವಣಿಗೆ ಸ್ಥಳೀಯ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿತ್ತು.

ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್‌ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಿರುವುದು ಕಂಡು ಬಂದಿದೆ.

ಈ ಗೋಡೆ ಬರಹ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹುಟ್ಟುವಂತೆ ಮಾಡಿತ್ತು. ಬಳಿಕ ನಿವಾಸಿಗಳು ತಕ್ಷಣವೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ.

ಬಳಿಕ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಮಗುವೊಂದು ಸಂದೇಶವನ್ನು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.

scribbled on wall
ಶಿವಮೊಗ್ಗ ಇಸಿಸ್ ಪಿತೂರಿ, ಮಂಗಳೂರು ಗೋಡೆ ಬರಹ ಪ್ರಕರಣ: ಎನ್ಐಎಯಿಂದ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com