ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಜಬೀರ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಕ್ರಿಮಿನಲ್ ಬೆದರಿಕೆಗಾಗಿ ಐಪಿಸಿ ಸೆಕ್ಷನ್ 506 ರ ಅಡಿಯಲ್ಲಿ ಅಪರಾಧಿಗೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ.
Man gets 20-year imprisonment for rape of minor
ಸಾಂದರ್ಭಿಕ ಚಿತ್ರ
Updated on

ಮಂಗಳೂರು: 2023 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಂಗಳೂರು ನ್ಯಾಯಾಲಯವು 30 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಂಟ್ವಾಳ ತಾಲೂಕಿನ ಸಜಿಪನಾಡು ಗ್ರಾಮದ ನಿವಾಸಿ ಮನ್ಸೂರ್ ಅಲಿಯಾಸ್ ಮೊಹಮ್ಮದ್ ಮನ್ಸೂರ್ ಅಲಿಯಾಸ್ ಜಬೀರ್ ಗೆ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ(ಎಫ್‌ಟಿಎಸ್‌ಸಿ -2), 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿದೆ.

ಕ್ರಿಮಿನಲ್ ಬೆದರಿಕೆಗಾಗಿ ಐಪಿಸಿ ಸೆಕ್ಷನ್ 506 ರ ಅಡಿಯಲ್ಲಿ ಅಪರಾಧಿಗೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ.

Man gets 20-year imprisonment for rape of minor
ಬೀದರ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು

ಮೇ 30, 2023 ರಂದು ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದಾನೆ ಮತ್ತು ಕೃತ್ಯವನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿ 16 ವರ್ಷದ ಬಾಲಕಿ ಡಿಸೆಂಬರ್ 23, 2023 ರಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಈ ಸಂಬಂಧ ಪೋಕ್ಸೊ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು, ಜುಲೈ 2, 2024 ರಂದು ಮನ್ಸೂರ್‌ನನ್ನು ಬಂಧಿಸಿದ್ದರು.

ಇನ್ಸ್‌ಪೆಕ್ಟರ್‌ಗಳಾದ ಗುರುರಾಜ್ ಮತ್ತು ರಾಜೇಂದ್ರ ಬಿ. ಅವರು ಈ ಪ್ರಕರಣದ ತನಿಖೆಯ ನೇತೃತ್ವ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com