
ಬೆಂಗಳೂರು: ಜನನಿಬಿಡ ಪ್ರದೇಶವಾಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ವಿಡಿಯೋ ಶೂಟ್ ಮಾಡಿ, ವಾಹನ ಸವಾರರಿಗೆ ಕಿರಿಕಿರಿಯುಂಟು ಮಾಡಿದ German Influencer ಯೂನೆಸ್ ಜರೋ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡರು.
ಇನ್‌ಸ್ಟಾಗ್ರಾಮ್‌ನಲ್ಲಿ 11.2 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಯೂನೆಸ್ ಜರೋ ಯಾವುದೇ ಅನುಮತಿ ಪಡೆಯದೆ ಬೀದಿ ಪ್ರದರ್ಶನ ನೀಡಿದ್ದಕ್ಕಾಗಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಯೂನೆಸ್ ಜರೋ ಅವರ ಪ್ರದರ್ಶನವು ಚರ್ಚ್ ಸ್ಟ್ರೀಟ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟುಮಾಡಿತು. ಕೆಲವು ವಾಹನ ಚಾಲಕರು ಸಾರ್ವಜನಿಕ ಕಿರಿಕಿರಿಯ ಬಗ್ಗೆ ನಮ್ಮ 112 ಗೆ ಮಾಹಿತಿ ನೀಡಿದರು. ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಯೂನೆಸ್ ಜರೋ ಅವರನ್ನು ಠಾಣೆಗೆ ಕರೆದೊಯ್ದಿತು.
ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಇದೇ ಮೊದಲು. ಅವರು ನನ್ನನ್ನು ಜೈಲಿಗೆ ಕಳುಹಿಸುತ್ತಾರೆ ಎಂದು ಹೆದರಿದ್ದೆ. ಆದರೆ, ಅದೃಷ್ಟ ಚೆನ್ನಾಗಿತ್ತು. ನಾನು ಸುರಕ್ಷಿತವಾಗಿದ್ದೇನೆ. ನಾನು ಭಾರತವನ್ನು ಪ್ರೀತಿಸುತ್ತೇನೆ" ಎಂದು ಯೂನೆಸ್ ಜರೋ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement