
ಬೆಂಗಳೂರು: ಮಹಾರಾಷ್ಟ್ರವನ್ನು ತೊರೆಯಲು ಬಯಸುವ ಎಲ್ಲಾ ಕ್ವಾಂಟಮ್ ಟೆಕ್ ಕಂಪನಿಗಳಿಗೆ ಬೆಂಗಳೂರಿಗೆ ಸ್ವಾಗತಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ, ನಮ್ಮಲ್ಲಿ ಸಾಕಷ್ಟು ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯಗಳಿವೆ ಎಂದು ಅವರು ಹೇಳಿದರು.
"ಅವರಿಗೆ ಬೇಕಾದುದನ್ನು ಒದಗಿಸಲು ನಾವು ಸಿದ್ಧರಿದ್ದೇವೆ" ಎಂದು ಡಿಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ನಡೆಯುತ್ತಿರುವ ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಈ ಶೃಂಗಸಭೆಯನ್ನು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ(KSTePS), IISc ಕ್ವಾಂಟಮ್ ಟೆಕ್ನಾಲಜಿ ಇನಿಶಿಯೇಟಿವ್(IQTI) ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಜುಲೈ 26 ರಂದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಪುಣೆಯಲ್ಲಿರುವ ಐಟಿ ಕಂಪನಿಗಳು ಬೆಂಗಳೂರು ಮತ್ತು ಹೈದರಾಬಾದ್‌ಗೆ "ಸ್ಥಳಾಂತರಗೊಳ್ಳುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಾಗರಿಕ ಕಾಮಗಾರಿಗಳನ್ನು ಪರಿಶೀಲಿಸುವಾಗ ಅಜಿತ್ ಪವಾರ್ ಅವರು ನೀಡಿದ್ದ ಈ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು.
Advertisement