
ಬೆಳಗಾವಿ: ಜಿಲ್ಲೆಯ ಕಾಕತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿದ ಆರೋಪಿಗಳು ಆಕೆಯನ್ನು ಬ್ಲಾಕ್ ಮೇಲ್ ಪದೇ ಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇತರ ನಾಲ್ವರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ.
ವಿಡಿಯೋ ಇಟ್ಟುಕೊಂಡು ದುಷ್ಕರ್ಮಿಗಳು ಬಾಲಕಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದು, ಸಂತ್ರಸ್ತೆ ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರ ಪ್ರಕಾರ, ಆರು ತಿಂಗಳ ಹಿಂದೆ, 15 ವರ್ಷದ ಬಾಲಕಿಯನ್ನು ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ.
ತನ್ನ ಪ್ರಿಯಕರ ತನ್ನನ್ನು ಆಮಿಷವೊಡ್ಡಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದಿದ್ದಾಗಿ ಬಾಲಕಿ ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Advertisement