ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್

ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದೆ.

ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್‌ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾಹಿತಿ ನೀಡಿದ್ದಾರೆ.

ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚಿನ ಸಂಖ್ಯೆಯ ಜನರಿಗೆ ಈಗಾಗಲೇ ಲಸಿಕೆ ಹಾಕಲಾಗಿದೆ. ಸೋಂಕು ಉಲ್ಭಣಗೊಳ್ಳುವುದಿಲ್ಲ. ಪ್ರಸ್ತುತ ಆರೋಗ್ಯ ಇಲಾಖೆಯ ಮಾರ್ಗದರ್ಶನದ ಆಧಾರದ ಮೇಲೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ ಸಾರ್ವಜನಿಕರು ಮತ್ತು ವಿಶೇಷವಾಗಿ ಮಕ್ಕಳು ಮಾಸ್ಕ್ ಧರಿಸುವಂತೆ ಮನವಿ ಮಾಡಿದ್ದಾರೆ.. ಶೀತ ಮತ್ತು ಇತರ ಅಲರ್ಜಿಗಳಿಂದ ಬಳಲುತ್ತಿರುವ ಜನರು ಮಾಸ್ಕ್ ಧರಿಸಬೇಕು. ಕೋವಿಡ್ -19 ರ ಉತ್ತುಂಗದಲ್ಲಾದ್ದಾಗ ಅನುಸರಿಸಿದ ಶಿಷ್ಟಾಚಾರವನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡುವ ಜನರು ಮಾಸ್ಕ್ ಧರಿಸಬೇಕು. ಇದು ಸೋಂಕು ಹರಡುವುದನ್ನಷ್ಟೇ ತಡೆಯುವುದಲ್ಲದೆ, ಯಾವುದೇ ಅಲರ್ಜಿಗಳು ತಗುಲದಂತೆ ತಡೆಯುತ್ತದೆ. ಸಾಂಕ್ರಾಮಿಕ ರೋಗಗಳು ತಡೆಯದಂತೆಯೂ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ
COVID-19: ರಾಜ್ಯದಲ್ಲಿ ಇಂದು 40 ಜನರಿಗೆ ಕೊರೋನಾ ಸೋಂಕು ದೃಢ; ಒಟ್ಟು ಪ್ರಕರಣಗಳ ಸಂಖ್ಯೆ 211ಕ್ಕೆ ಏರಿಕೆ!

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com