'ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಣೆ; ನಿಮ್ಮ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ

'ಗೃಹ ಆರೋಗ್ಯ ಯೋಜನೆ' ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ 14 ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ(ಎನ್‌ಸಿಡಿ) ತಪಾಸಣೆ ಮತ್ತು ನಿರ್ವಹಣೆ ಮಾಡುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ.
'ಗೃಹ ಆರೋಗ್ಯ ಯೋಜನೆ' ಕುರಿತು ಆಶಾ ಕಾರ್ಯಕರ್ತೆಯರಿಗಾಗಿ ಸಿದ್ಧಪಡಿಸಿರುವ ಕೈಪಿಡಿಯನ್ನು ಆರೋಗ್ಯ ಸಚಿವರು ಬಿಡುಗಡೆ ಮಾಡಿದರು.
'ಗೃಹ ಆರೋಗ್ಯ ಯೋಜನೆ' ಕುರಿತು ಆಶಾ ಕಾರ್ಯಕರ್ತೆಯರಿಗಾಗಿ ಸಿದ್ಧಪಡಿಸಿರುವ ಕೈಪಿಡಿಯನ್ನು ಆರೋಗ್ಯ ಸಚಿವರು ಬಿಡುಗಡೆ ಮಾಡಿದರು.
Updated on

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ "ಗೃಹ ಆರೋಗ್ಯ ಯೋಜನೆಯ"ನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದು, ಇನ್ನು ಮುಂದೆ ನಿಮ್ಮ ಮನೆ ಬಾಗಿಲಿನಲ್ಲೇ ಉಚಿತ ಆರೋಗ್ಯ ಸೇವೆ ಒದಗಿಸುತ್ತಿದೆ.

'ಗೃಹ ಆರೋಗ್ಯ ಯೋಜನೆ' ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ 14 ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ(ಎನ್‌ಸಿಡಿ) ತಪಾಸಣೆ ಮತ್ತು ನಿರ್ವಹಣೆ ಮಾಡುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ.

ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಔಷಧ ವಿತರಿಸುವ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಯಿತು. ಈ ಯೋಜನೆಯು, ಅಕ್ಟೋಬರ್ 24, 2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದರು.

ಇದರ ಯಶಸ್ಸಿನ ನಂತರ, ಇದೀಗ ಈ ಯೋಜನೆಯನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಆರಂಭದಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಲ್ಲಿ ಪ್ರಮುಖ NCD ಗಳಿಗೆ ತಪಾಸಣೆ ನಡೆಸಲಾಯಿತು. ಅದರಲ್ಲಿ ಪ್ರಮುಖವಾಗಿ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

'ಗೃಹ ಆರೋಗ್ಯ ಯೋಜನೆ' ಕುರಿತು ಆಶಾ ಕಾರ್ಯಕರ್ತೆಯರಿಗಾಗಿ ಸಿದ್ಧಪಡಿಸಿರುವ ಕೈಪಿಡಿಯನ್ನು ಆರೋಗ್ಯ ಸಚಿವರು ಬಿಡುಗಡೆ ಮಾಡಿದರು.
ಮನೆ ಮನೆಗೆ ಹೋಗಿ ರಾಜ್ಯದ ಜನರ ಆರೋಗ್ಯ ತಪಾಸಣೆ ನಡೆಸುವ "ಗೃಹ ಆರೋಗ್ಯ" ಯೋಜನೆ ಉದ್ಘಾಟನೆ

ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗುವರು. ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ NCD ಪೊರ್ಟಲ್ ನಲ್ಲಿ ಡೇಟಾ ನಮೂದಿಸಲಿದ್ದು, ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನ ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ.

ಇಂದು ವಿಕಾಸಸೌಧದಲ್ಲಿ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು ಹೊರತಾಗಿ ಬೇರೆ ಯಾರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. ಅವೆಲ್ಲವನ್ನ ತುಲನೆ ಮಾಡಿ ಯೋಜನೆಯಲ್ಲಿ ಒಂದಿಷ್ಟು ಬದಲಾವಣೆಗಳನ್ನ ತರಲಾಗಿದೆ. ಆಶಾ ಕಾರ್ಯಕರ್ತರಯರಿಂದ ಹಿಡಿದು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಿ, ಸ್ಪಷ್ಟ ಮಾಹಿತಿಯುಳ್ಳ ಕೈಪಿಡಿ ನೀಡಿದ್ದೇವೆ. ತಪಾಸಣೆ ಬಳಿಕ ರೋಗಿಗಳ ಮೇಲ್ವಿಚಾರಣೆ ಕೂಡ ನಡೆಯಬೇಕು. ಆ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಯಾರು ಏನು ಮಾಡಬೇಕು ಎಂಬ ಸ್ಪಷ್ಟ ಚಿತ್ರಣವನ್ನ ಆರೋಗ್ಯ ಸಿಬ್ಬಂದಿಗಳಿಗೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com