
ಬೆಂಗಳೂರು: 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್, ಫಲಾನುಭವಿಗಳ ಕುರಿತು ನಿರ್ಲಕ್ಷ್ಯ ತೋರುತ್ತಿದ್ದು, ಫಲಾನುಭವಿಗಳಿಗೆ ಸರಿಯಾಗಿ ಯೋಜನೆ ತಲುಪಿಸದಿದ್ದರೂ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿದ್ದ ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಕಾರ್ಯಕರ್ತರಿಗೆ 7.65 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಸರ್ಕಾರ ಈ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದ್ದು, ಟಿಕೆಟ್ ದರ ಏರಿಕೆ ಮಾಡಿ ಬರೆ ಎಳೆದಿದೆ. ಇನ್ನು ಯುವನಿಧಿ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡುತ್ತಿಲ್ಲ. ಅನ್ನಭಾಗ್ಯದ ಲೋಪದೋಷಗಳ ಕುರಿತು ಜನರು ಹಿಡಿಶಾಪ ಹಾಕುತ್ತಿದ್ದಾರೆ. ಗೃಹಜ್ಯೋತಿಯ ಸರಾಸರಿಯನ್ನು 2ನೇ ವರ್ಷ ಇನ್ನೂ ಪರಿಷ್ಕರಣೆ ಮಾಡಿಲ್ಲ.
ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳು ಲಾಭ ಪಡೆಯಿದ್ದರೂ, ಸರ್ಕಾರ ಮಾತ್ರಕ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿದ್ದ ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಭರ್ಜರಿ ಹಣ ಬಿಡುಗಡೆ ಮಾಡಿದೆ.
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ 7.65 ಕೋಟಿ ಹಣ ಬಿಡುಗಡೆಗೆ ಸರ್ಕಾರ ಆದೇಶ ನೀಡಿದೆ.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರಿಗೆ ಹಣ ಬಿಡುಗಡೆಗೆ ಆದೇಶ ನೀಡಲಾಗಿದೆ.
ಏಪ್ರಿಲ್ ತಿಂಗಳಿಂದ ಆಗಸ್ಟ್ ವರೆಗೂ ಸಭಾ ಭತ್ಯೆ ಬಿಡುಗಡೆಗೆ ಸೂಚನೆ ನೀಡಲಾಗಿದ್ದು, 3 ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಇನ್ನು ಆದೇಶದಲ್ಲಿ ಅಧಿಕಾರಿಗಳಿಗೆ ಷರತ್ತು ಕೂಡ ವಿಧಿಸಲಾಗಿದೆ. ಈ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಕಾಲಕಾಲಕ್ಕೆ ನೀಡಲಾಗಿರುವ ಸೂಚನೆಗಳ ಅನುಸಾರ ಆದ್ಯತೆಯ ಮೇಲೆ ವೆಚ್ಚ ಮಾಡಬೇಕು. ಷರಾದಲ್ಲಿ ತಿಳಿಸಿರುವ ಉದ್ದೇಶಕ್ಕೆ ಮಾತ್ರ ವೆಚ್ಚ ಮಾಡಬೇಕು. ಯಾವುದೇ ಹಂತದಲ್ಲಿ ಅನುಷ್ಠಾನ ಅಧಿಕಾರಿ ಹಂತದಲ್ಲಿ ವಿಳಂಬವಾಗಿ. ಅನುದಾನ ವ್ಯತ್ಯಾಸವಾದಲ್ಲಿ ಮತ್ತೊಮ್ಮೆ ಅನುದಾನವನ್ನು ಒದಗಿಸುವುದಿಲ್ಲ. ಭತ್ಯೆ ವಿಳಂಬಗೊಳಿಸಿದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಸರ್ಕಾರದ ಈ ನಡೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗ್ಯಾರಂಟಿ ಸಮಿತಿ ಹೆಸರಲ್ಲಿ ಮುಂಗಡ ವೇತನ ನೀಡುವ ಈ ದರಿದ್ರ ಸರ್ಕಾರ ಡಾಟಾ ಆಪರೇಟರ್‌ಗಳಿಗೆ 4 ತಿಂಗಳುಗಳಿಂದ ವೇತನ ನೀಡದೆ ಸತಾಯಿಸುತ್ತಿದೆ. ವೇತನ ನೀಡದ ಕಾರಣ ಆಸ್ಪತ್ರೆಗಳಲ್ಲಿ ಡಾಟಾ ಆಪರೇಟರ್‌ಗಳ ಸೇವೆ ಲಭ್ಯವಾಗುತ್ತಿಲ್ಲ, ಇದರಿಂದ ಸಾರ್ವಜನಿಕರು ಹೈರಾಣಾಗುತ್ತಿದ್ದಾರೆ. ರಾಜ್ಯದ ಸರ್ಕಾರಿ/ ಅರೆ ಸರ್ಕಾರಿ/ ಗುತ್ತಿಗೆ ಆಧಾರಿತ ನೌಕರರನ್ನೂ ಮೀರಿಸಿ ಕಾಂಗ್ರೆಸ್ ಕಾರ್ಯಕರ್ತರು ಮುಂಗಡ ವೇತನ ಪಡೆಯುತ್ತಿರುವುದು ಈ ರಾಜ್ಯದ ದುರಂತವೇ ಸರಿ ಎಂದು ಕಿಡಿಕಾರಿದೆ.
Advertisement