Covid-19: ರಾಜ್ಯದಲ್ಲಿ ಇಂದು 53 ಮಂದಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
covid-19 cases
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 53 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 582ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 675 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 53 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 324 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 319 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

covid-19 cases
COVID-19: ಭಾರತದಲ್ಲಿ 4,000 ಗಡಿ ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ!

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com