ಕಮಲ್ ಹಾಸನ್ ಕ್ಷಮೆ ಕೋರದ ಹೊರತು 'Thug Life' ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ: KFCC ಸ್ಪಷ್ಟನೆ

ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ' ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ.
Kamal Haasan
ನಟ ಕಮಲ್ ಹಾಸನ್
Updated on

ಬೆಂಗಳೂರು: ನಟ ಕಮಲ್ ಹಾಸನ್ ಕ್ಷಣೆಯಾಚಿಸದ ಹೊರದು 'ಥಗ್ ಲೈಫ್' ಚಿತ್ರ ರಾಜ್ಯದಲ್ಲಿ ಬಿಡುಗಡೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಸ್ಪಷ್ಟವಾಗಿ ಹೇಳಿದೆ.

ಸೋಮವಾರ ಕನ್ನಡ ಪರ ಸಂಘಟನೆಗಳ ಮನವಿ ಸ್ವೀಕರಿಸಿದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ' ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಚಿತ್ರರಂಗ ಮಾತ್ರವಲ್ಲದೆ, ಕನ್ನಡ ಪರ ಸಂಘಟನೆಗಳು ಹಾಗೂ ಎಲ್ಲಾ ಪಕ್ಷದ ನಾಯಕರೂ ಕಮಲ್‌ ಹಾಸನ್‌ ಮಾತನ್ನು ಖಂಡಿಸಿದ್ದಾರೆ. ಚಿತ್ರಮಂದಿರಗಳ ಮಾಲೀಕರು, ವಿತರಕರು ಬೇರೆ ಸಿನಿಮಾಗಳನ್ನು ಹಾಕಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

ಕ್ಷಮೆ ಕೇಳಿದರೂ ತಕ್ಷಣದಲ್ಲೇ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ದೂರು ನೀಡಿದವರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಮಲ್‌ ಹಾಸನ್‌ ದುಬೈನಲ್ಲಿದ್ದಾರೆ. ಮಂಗಳವಾರ(ಜೂನ್‌ 3) ಚೆನ್ನೈಗೆ ಮರಳುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ‘ಥಗ್‌ಲೈಫ್‌’ ಸಿನಿಮಾದ ವಿತರಕರು ಜೂನ್‌ 3ರ ಮಧ್ಯಾಹ್ನದವರೆಗೆ ಸಮಯ ಕೇಳಿದ್ದಾರೆ’ ಎಂದು ತಿಳಿಸಿದರು.

ನಿರ್ಮಾಪಕ ಸಾ.ರಾ.ಗೋವಿಂದು ಅವರು ಮಾತನಾಡಿ, ತಮಿಳುನಾಡು ಚಿತ್ರೋದ್ಯಮ ಕಮಲ್‌ ಹಾಸನ್‌ ಪರ ನಿಂತಿದೆ. ಆ ಕೆಲಸ ಇಲ್ಲಿ ಆಗಬೇಕು. ನಮ್ಮ ಕಲಾವಿದರ ಸಂಘಕ್ಕೆ ನಾಡಿನ ಬಗ್ಗೆ ಗೌರವ ಇದ್ದರೆ ಅವರೇ ಮುಂದೆ ಬರಬೇಕು. ಇದು ಎಲ್ಲರ ಕರ್ತವ್ಯ. ರಾಜ್ಯದ ಸ್ವಾಭಿಮಾನದ ಪ್ರಶ್ನೆ ಇದು. ಕಮಲ್‌ ಹಾಸನ್‌ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ತನ್ನ ಈ ನಿರ್ಧಾರದಲ್ಲಿ ವಾಣಿಜ್ಯ ಮಂಡಳಿ ಒಂದು ಹೆಜ್ಜೆಯೂ ಹಿಂದಕ್ಕೆ ಹೋಗಲ್ಲ. ಸಿನಿಮಾದ ಹಂಚಿಕೆದಾರರು ಒಬ್ಬ ಕನ್ನಡಿಗ. ಅವರಿಗೆ ಅನ್ಯಾಯ ಆಗಬಾರದು ಎನ್ನುವ ಉದ್ದೇಶದಿಂದ ಸಮಯ ನೀಡಿದ್ದೇವೆ. ಕಮಲ್‌ ಹಾಸನ್‌ಗಾಗಿ ನಾವು ಕಾಯುತ್ತಿಲ್ಲ ಎಂದು ಹೇಳಿದರು.

Kamal Haasan
ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಸುಗಮ ಪ್ರದರ್ಶನಕ್ಕೆ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com