'ಮೊದ್ಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ ಮಾಡೋಣ': Kamal Hassan ಗೆ ಜಡ್ಜ್ ಮೌಖಿಕ ತಾಕೀತು; Video

ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು.
Kamal Hassan
ಕಮಲ್ ಹಾಸನ್
Updated on

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಹೈಕೋರ್ಟ್ ನ್ಯಾಯಾಧೀಶರು ಕೂಡ ಕ್ಷಮೆ ಕೇಳಲು ತಾಕೀತು ಮಾಡಿದ್ದಾರೆ.

ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು. ‘ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ, ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ರಾಜಕೀಯ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ ಎಂದಿದ್ದರು.

ಕಮಲ್​ ಹಾಸನ್​ ಕ್ಷಮೆಯಾಚಿಸದಿದ್ದರೆ ಅವರ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಹೇಳಿತ್ತು.

Kamal Hassan
ಕಮಲ್ ಹಾಸನ್ ಕ್ಷಮೆ ಕೋರದ ಹೊರತು 'Thug Life' ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ: KFCC ಸ್ಪಷ್ಟನೆ

ಇಂದು ಹೈಕೋರ್ಟ್ ನಲ್ಲಿ ಕಮಲ್ ಹಾಸನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂತು. ಈ ವೇಳೆ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್​. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ’ ಎಂದು ಖಡಾಖಂಡಿತವಾಗಿ ಹೇಳಿದರು.

ಇದಕ್ಕೆ ಕಮಲ್ ಹಾಸನ್ ಪರ ವಕೀಲರು ಪ್ರತಿಕ್ರಿಯೆ ನೀಡಲು ಮಧ್ಯಾಹ್ನ 2.30ರವರೆಗೆ ಸಮಯಾವಕಾಶ ಕೋರಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com