
ಬೆಂಗಳೂರು: ಚಂದಾಪುರದ ರೈಲ್ವೆ ಸೇತುವೆಯ ಬಳಿ ಟ್ರಾಲಿ ಬ್ಯಾಗ್‌ನಲ್ಲಿ ಶವವಾಗಿ ಪತ್ತೆಯಾದ 18 ವರ್ಷದ ಯುವತಿಯ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸರುವ ನಗರ ಪೊಲೀಸರು, ಆರೋಪಿ ಪತ್ತೆಗಾಗಿ ಬಿಹಾರ ರಾಜ್ಯಕ್ಕೆ ತೆರಳಿದ್ದಾರೆ.
ಆರೋಪಿ ಬಿಹಾರ ರಾಜ್ಯದಲ್ಲಿರುವ ಕುರಿತು ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಆನೇಕಲ್ ಉಪವಿಭಾಗದ ಪೊಲೀಸ್ ವಿಶೇಷ ತಂಡ ಬಿಹಾರ ರಾಜ್ಯಕ್ಕೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.
ವಿಶ್ವಾಸಾರ್ಹ ಮಾಹಿತಿಗಳ ಆಧಾರದ ಮೇಲೆ ಆರೋಪಿಯನ್ನು ಗುರ್ತಿಸಲಾಗಿದ್ದು, ಸೂರ್ಯ ಸಿಟಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಇತರ ಅಧಿಕಾರಿಗಳು ಬಿಹಾರಕ್ಕೆ ತೆರಳಿದ್ದಾರೆಂದುಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ. ಮೃತ ಯುವತಿಯ ಫೋಟೋವನ್ನು ದೇಶದಾದ್ಯಂತ ಎಲ್ಲಾ ಪೊಲೀಸ್ ಠಾಣೆಗೆ ಕಳುಹಿಸಲಾಗಿತ್ತು. ಬಳಿಕ ಯುವತಿಯ ಗುರುತು ಪತ್ತೆಯಾಗಿತ್ತು.
ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಸಾಕ್ಷ್ಯಗಳು ಆರೋಪಿ ಪತ್ತೆಗೆ ಸಹಾಯ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Advertisement