
ಬೆಂಗಳೂರು: ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 81.82 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.
ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನ ಕನಕಪುರ ಮುಖ್ಯ ರಸ್ತೆಯಲ್ಲಿದ್ದ ಗೋಡಾನ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಸುಮಾರು 81.82 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಈ ವೇಳೆ ಇಬ್ಬರನ್ನು ಬಂಧಿಸಲಾಗಿದೆ.ವಶಪಡಿಸಿಕೊಂಡ ವಸ್ತುಗಳಲ್ಲಿ 61.8 ಲಕ್ಷ ರೂ. ಮೌಲ್ಯದ ವಿವಿಧ ತಂಬಾಕು ಮತ್ತು ಚೂಯಿಂಗ್ ಉತ್ಪನ್ನಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) 2ನೇ ಹಂತದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಅಂಗಡಿಯಲ್ಲಿ ಇ-ಸಿಗರೇಟ್‌ಗಳು, ಹುಕ್ಕಾ ಫ್ಲೇವರ್‌ಗಳು ಮತ್ತು ವಿದೇಶಿ ಸಿಗರೇಟ್‌ಗಳನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಅಂಗಡಿ ಕೆಲಸಗಾರನನ್ನು ಬಂಧನಕ್ಕೊಳಪಡಿಸಿದೆ.
ಸಿಸಿಬಿ ಅಧಿಕಾರಿಗಳು ಅಂಗಡಿಯ ಮೇಲೆ ದಾಳಿ ನಡೆಸಿ 201 ಇ-ಸಿಗರೇಟ್‌ಗಳು, 297 ಹುಕ್ಕಾ ಫ್ಲೇವರ್‌ಗಳು ಮತ್ತು ಆರು ವಿದೇಶಿ ಸಿಗರೇಟ್ ಪ್ಯಾಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಉತ್ಪನ್ನಗಳ ಒಟ್ಟು ಮೌಲ್ಯ 1.7 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಂಗಡಿ ಮಾಲೀಕ ಪರಾರಿಯಾಗಿದ್ದು, ಆತನ ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಅಧಿಕಾರಿಗಳು ಹೇಳಿದ್ದಾರೆ.
Advertisement