IPL ಚಾಂಪಿಯನ್ RCB ತಂಡಕ್ಕೆ ವಿಧಾನಸೌಧದ ಎದುರು ಸಿಎಂ ಸಿದ್ದರಾಮಯ್ಯ ಸನ್ಮಾನ

ಸಂಜೆ 4:30ಕ್ಕೆ ಖಾಸಗಿ ಹೋಟೆಲ್​ನಿಂದ ಬಸ್​ಗಳಲ್ಲಿ ಆರ್​ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು.
RCB ತಂಡಕ್ಕೆ  ಸಿಎಂ ಸಿದ್ದರಾಮಯ್ಯ ಸನ್ಮಾನ
RCB ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸನ್ಮಾನ
Updated on

ಬೆಂಗಳೂರು: ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್(RCB) ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸನ್ಮಾನಿಸಿದರು.

ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ನಂತರ ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಲಾಯಿತು.

ಸಂಜೆ 4:30ಕ್ಕೆ ಖಾಸಗಿ ಹೋಟೆಲ್​ನಿಂದ ಬಸ್​ಗಳಲ್ಲಿ ಆರ್​ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ ಆಟಗಾರರನ್ನು ಬಸ್​ನಲ್ಲಿ ಕಳುಹಿಸಲಾಯಿತು.

RCB ತಂಡಕ್ಕೆ  ಸಿಎಂ ಸಿದ್ದರಾಮಯ್ಯ ಸನ್ಮಾನ
HAL ವಿಮಾನ ನಿಲ್ದಾಣದಲ್ಲಿ IPL ಚಾಂಪಿಯನ್ RCB ತಂಡ ಸ್ವಾಗತಿಸಿದ ಡಿಸಿಎಂ ಡಿಕೆ ಶಿವಕುಮಾರ್

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com