RCB IPL ಚಾಂಪಿಯನ್: CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಸೇರಿ ಹಲವರಿಂದ ಅಭಿನಂದನೆ

ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಫೈನಲ್​ನಲ್ಲಿ ಪಂಜಾಬ್​ ವಿರುದ್ಧ ಆರ್​ಸಿಬಿ ಭರ್ಜರಿ ಜಯ ಗಳಿಸಿದ್ದು, ಈ ಮೂಲಕ ಅಭಿಮಾನಿಗಳ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು.

ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Rrrrrrrrr.... Cccccccc.... Bbbbbbbbb....ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಕೂಡ ಆರ್‌ಸಿಬಿ ತಂಡಕ್ಕೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

18 ವರ್ಷಗಳ ಕನಸು ನನಸು ಮಾಡಿದ ಆರ್"ಸಿಬಿ ತಂಡಕ್ಕೆ ಹೃತ್ಪೂರ್ವಕ ಶುಭಾಶಯಗಳು. ಈ ಸಲ ಕಪ್ ನಮ್ದೇ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಂಗ್ರಹ ಚಿತ್ರ
IPL 2025 ಟ್ರೋಫಿ ಹೊತ್ತು 'RCB Champions' ಇಂದು ಬೆಂಗಳೂರಿಗೆ: ನಗರದಲ್ಲಿ Victory Parade; ಎಲ್ಲಿಂದ, ಯಾವಾಗ ಶುರು..?

ಬೆಂಗಳೂರಿನಲ್ಲಿ ಟಿವಿ ಪರದೆ ಮೂಲಕ ಪಂದ್ಯ ವೀಕ್ಷಿಸಿದ ಡಿಸಿಎಂ ಅವರು ಆರ್'ಸಿಬಿ ಗೆಲ್ಲುತ್ತಿದ್ದಂತೆ ಸಂಭ್ರಮ ಆಚರಿಸಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪೋಸ್ಟ್ ಮಾಡಿ, ಹ್ಯಾಟ್ಸ್ ಆಫ್ ಆರ್'ಸಿಬಿ. ಸುದೀರ್ಘ ಕಾಯವಿಕೆ ಅಂತ್ಯವಾಗಿದೆ. ಈ ಸಲ ಕಪ್ ನಮ್ದು. ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ದ್ವಿಗುಣಗೊಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಪೋಸ್ಟ್ ಮಾಡಿ, ‘ಐಪಿಎಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರ್'ಸಿಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಧೈರ್ಯ ಮತ್ತು ಉತ್ಸಾಹವನ್ನು ಪ್ರದರ್ಶಿಸುವ ಮೂಲಕ ಗಮನಾರ್ಹ ಗೆಲುವಿನ ನಗೆ ಬೀರಿದೆ. ಮುಂದಿನ ಪ್ರಯಾಣದಲ್ಲಿ ಆರ್‌ಸಿಬಿ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ’ ಎಂದು ಅಭಿನಂದಿಸಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿಯವರು ಪೋಸ್ಟ್ ಮಾಡಿ, ಐಪಿಎಲ್ 2025 ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸುತ್ತೇನೆಂದು ಬರೆದಿದ್ದಾರೆ.

ರಾಜ್ಯ ಬಿಜೆಪಿ ಪೋಸ್ಟ್ ಮಾಡಿ, ಕಪ್‌ ನಮ್ದೇ! ಐಪಿಎಲ್‌ ಇತಿಹಾಸದಲ್ಲಿ ಮೊತ್ತಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚರಿತ್ರೆ ಬರೆದಿದೆ. ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com