CM ಸಿದ್ದರಾಮಯ್ಯ ACS ಆಗಿ IAS​ ಅಧಿಕಾರಿ Anjum Parvez ನೇಮಕ: ವರದಿ

ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಅಂಜುಂ ಪರ್ವೇಜ್ (Anjum Parvez) ನಿರ್ವಹಿಸಲಿದ್ದಾರೆ ಎನ್ನಲಾಗಿದೆ.
Vidhanasoudha
ವಿಧಾನಸೌಧ
Updated on

ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ (Anjum Parvez) ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಅಂಜುಂ ಪರ್ವೇಜ್ (Anjum Parvez) ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದು, ಐಎಎಸ್ ಅಧಿಕಾರಿಯಾಗಿ ವೃತ್ತಿಜೀವನದ ಜೊತೆಗೆ ಅವರು ಕರ್ನಾಟಕದ ವಿವಿಧ ಇಲಾಖೆಗಳಿಗೆ ಸೇವೆ ಸಲ್ಲಿಸಿದ್ದಾರೆ.

Vidhanasoudha
Bengaluru Stampede: ಕಾಲ್ತುಳಿತ ಪ್ರಕರಣದ ತನಿಖೆಗೆ ಮ್ಯಾಜಿಸ್ಟ್ರೇಟ್ ನೇಮಕ

ಕರ್ನಾಟಕ ಕೇಡರ್ ಐಎಎಸ್​ ಅಧಿಕಾರಿಯಾಗಿರುವ ಅಂಜುಮ್ ಪರ್ವೇಜ್ ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಶ್ರೀಮಂತ ಮತ್ತು ವೈವಿಧ್ಯಮಯ ಅನುಭವ ಮತ್ತು ಜ್ಞಾನವನ್ನು ಹೊಂದಿದ್ದಾರೆ.

ಅಂಜುಮ್ ಅವರು ಕರ್ನಾಟಕ ಸರ್ಕಾರಕ್ಕೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವುಗಳಲ್ಲಿ ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿಗಳೂ ಸೇರಿವೆ.

ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ.ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. ಅವರು 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೇ, ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com