Bengaluru Stampede: ಕಾಲ್ತುಳಿತ ಪ್ರಕರಣದ ತನಿಖೆಗೆ ಮ್ಯಾಜಿಸ್ಟ್ರೇಟ್ ನೇಮಕ

ಆರ್​ಸಿಬಿ (RCB) ವಿಜಯ ಸಂಭ್ರಮಾಚರಣೆ ವೇಳೆ ಸಂಭವಿಸಿದ ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಿ, ಆದೇಶ ಹೊರಡಸಿದೆ.
Bengaluru Stampade case
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ
Updated on

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ನೇಮಕ ಮಾಡಿದೆ.

ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್ ಸಿಬಿ ತಂಡ 18 ವರ್ಷಗಳ ಬಳಿಕ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿ ಎತ್ತಿ ಹಿಡಿದಿದ್ದು, ಇದೇ ಖುಷಿಯನ್ನು ಬೆಂಗಳೂರಿನಲ್ಲಿ ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಮುಂದಾಗಿತ್ತು.

ಆಟಗಾರರ ಬಿಸಿ ಶೆಡ್ಯೂಲ್ ನಡುವೆಯೂ ಆರ್ ಸಿಬಿ ತಂಡ ಆಟಗಾರರನ್ನು ಬೆಂಗಳೂರಿಗೆ ಕರೆತಂದು ಅಭಿಮಾನಿಗಳ ಜೊತೆ ಸಂಭ್ರಮಾಚರಣೆ ಮಾಡಲು ನಿರ್ಧರಿಸಿತ್ತು. ಇದಕ್ಕಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಕೂಡ ಆಯೋಜನೆ ಮಾಡಲಾಗಿತ್ತು. ಆದರೆ ಇದೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದೆ.

ಈ ದುರಂದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು ಅಂತೆಯೇ 47 ಜನರು ಗಾಯಗೊಂಡಿದ್ದಾರೆ. ಆರ್​ಸಿಬಿ (RCB) ವಿಜಯ ಸಂಭ್ರಮಾಚರಣೆ ವೇಳೆ ಸಂಭವಿಸಿದ ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಿ, ಆದೇಶ ಹೊರಡಸಿದೆ. ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್.ಜಿ ಅವರನ್ನು ಸರ್ಕಾರ ನೇಮಕ ಮಾಡಿದೆ ಎಂದು ತಿಳಿದುಬಂದಿದೆ.

Bengaluru Stampade case
Bengaluru Stampede: 'ಅಭಿಮಾನಿಗಳ ಸುರಕ್ಷತೆಯೇ ಮುಖ್ಯ..'; ದುರಂತದ ಬಳಿಕ RCB, Virat Kohli ಮೊದಲ ಪ್ರತಿಕ್ರಿಯೆ

“ಆರ್​ಸಿಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭವು ನಡೆಯುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಏಕಾಏಕಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಈ ಕಾರ್ಯಕ್ರಮವು ಅಲ್ಪ ಕಾಲದಲ್ಲಿ ನಿರ್ಧರಿತವಾಗಿದ್ದರಿಂದ, ತಕ್ಷಣಕ್ಕೆ ಸಾಧ್ಯವಾದ ಎಲ್ಲ ಬಂದೋಬಸ್ತ್ ವ್ಯವಸ್ಥೆಗಳನ್ನು ಏರ್ಪಡಿಸಲಾಗಿತ್ತು.

ಆದರೂ, ಏಕಾಏಕಿ ಸಾವಿರಾರು ಅಭಿಮಾನಿಗಳು ಸೇರಿದ್ದರಿಂದ ಮಧ್ಯಾಹ್ನ 3.30 ಗಂಟೆಯಿಂದ 4:30 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ನುಗ್ಗುವಾಗ ಬ್ಯಾರಿಕೇಡ್ ಮುರಿದು ಒಬ್ಬರ ಮೇಲೆ ಒಬ್ಬರು ಬಿದ್ದು ಉಂಟಾದ ನೂಕು ನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ. ಈ ಘಟನೆಯಲ್ಲಿ 11 ಮಂದಿ ಮೃತರಾಗಿದ್ದಾರೆ. 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.”

“ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು, ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಸರ್ಕಾರ ನಿರ್ಧರಿಸಿದೆ” ಎಂದು ಆದೇಶ ಪತ್ರದಲ್ಲಿ ಉಲ್ಲೇಖವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com