ಭದ್ರತೆ ದೃಷ್ಟಿಯಿಂದ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ: ಗೃಹ ಸಚಿವ ಪರಮೇಶ್ವರ್

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ.
RCB victory
ಆರ್ ಸಿಬಿ ತಂಡದ ವಿಜಯೋತ್ಸವ
Updated on

ಬೆಂಗಳೂರು: ಐಪಿಎಲ್ -2025ನ್ನು ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು.

ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್​ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್​ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್​ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.

RCB victory
IPL 2025 ಟ್ರೋಫಿ ಹೊತ್ತು 'RCB Champions' ಇಂದು ಬೆಂಗಳೂರಿಗೆ: ನಗರದಲ್ಲಿ Victory Parade; ಎಲ್ಲಿಂದ, ಯಾವಾಗ ಶುರು..?

ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ&ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮೊದಲೇ ಸವಾರರಿಗೆ ಬೇರೆ ಬೇರೆ ಮಾರ್ಗದ ವ್ಯವಸ್ಥೆ ಮಾಡಿ. ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸುವಂತೆ ತಿಳಿಸಿದ್ದಾರೆ.

ಶಾಲೆ-ಕಾಲೇಜುಗಳಿಗೆ ರಜೆ

ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಹೇಳಿಕೆ ನೀಡಿದ್ದು, ವಿಧಾನಸೌಧದ ಮುಂದೆ RCB ಟೀಂಗೆ ಸರ್ಕಾರದಿಂದ ಸನ್ಮಾನ, ಪ್ರೋತ್ಸಾಹ ನೀಡಲಾಗುತ್ತದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟವಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದ ಬಳಿಕ ಶಾಲಾ-ಕಾಲೇಜಿಗೆ ರಜೆ ನೀಡಲು ಸೂಚಿಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com