
ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ದುರ್ಮರಣವನ್ನಪ್ಪಿ, ಮತ್ತಿ ಬ್ಬರು ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಆಕಾಶ್ (26) ಮತ್ತು ಮಂಗಳೂರು ಮೂಲದ ಅಫ್ಜಲ್ (26) ಮೃತರು. ಮಣಿ ಮತ್ತು ಕಾಸಿಂ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.
ಮಂಗಳವಾರ ಮುಂಜಾನೆ ಸುಮಾರು 1.30ಕ್ಕೆ ಬಿಜಿಎಸ್ ಮೇಲೇತುವೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಸವಾರರಾದ ಕೆ.ಪಿ.ಅಗ್ರಹಾರ ನಿವಾಸಿ ಆಕಾಶ್ ಗ್ರೈಂಡರ್ ಮೆಕ್ಯಾನಿಕ್ ಕೆಲಸ ಮತ್ತು ವಿಜಯನಗರ ನಿವಾಸಿ ಅಫ್ಜಲ್ ಬಟ್ಟೆ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆಕಾಶ್ ಮತ್ತು ಮಣಿ ರಾತ್ರಿ ಊಟ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟಿದ್ದರು. ಬಿಜಿಎಸ್ ಮೇಲೇತುವೆ ಗಣೇಶ ದೇವಸ್ಥಾನದ ಬಳಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಮುಂದೆ ಅಫ್ಜಲ್ ಮತ್ತು ಕಾಸಿಂ ಹೋಗುತ್ತಿದ್ದ ಎಲೆಕ್ಟಿಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳ ಸಮೇತ ನಾಲ್ವರು ಸವಾರರು ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಸವಾರ ಆಕಾಶ್ ಮತ್ತು ಅಫ್ಜಲ್ ಗಂಭೀರವಾಗಿ ಗಾಯಗೊಂಡರೆ, ಮಣಿ ಮತ್ತು ಕಾಸಿಂ ಕೈ ಹಾಗೂ ಕಾಲುಗಳಿಗೆ ಪೆಟ್ಟು ಬಿದ್ದಿದೆ. ಬಳಿಕ ಗಾಯಾಳು ಆಕಾಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಆಕಾಶ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮತ್ತೊಬ್ಬ ಗಾಯಾಳು ಅಫ್ಜಲ್‌ನನ್ನು ಪೀಪಲ್ಸ್ ಟ್ರಿ ಆಸ್ಪತ್ರೆಗೆ ಸಾಗಿಸುವಾಗ ಮೃತಟ್ಟಿದ್ದಾರೆ.
ಆಕಾಶ್‌ನ ಸ್ನೇಹಿತ ಮಣಿ ಮತ್ತು ಅಫೈಲ್‌ನ ಸ್ನೇಹಿತ ಕಾಸಿಂ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬೈಕ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.
Advertisement