Hemavati Link Canal: ಕೂಡಲೇ ಯೋಜನೆ ನಿಲ್ಲಿಸಿ; ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ಹಿಂಪಡೆಯಿರಿ; ಸಿಎಂಗೆ ಸೋಮಣ್ಣ ಆಗ್ರಹ

ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ.
V. Somanna
ಕೇಂದ್ರ ಸಚಿವ ವಿ. ಸೋಮಣ್ಣ
Updated on

ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ ಈ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ರೈತರ ಜೀವನಾಡಿ ನೀರಿಲ್ಲದೇ ಬದುಕು ಇಲ್ಲ ಎಂಬುದರ ಸಾಧಕ ಬಾಧಕಗಳ ಬಗ್ಗೆ ರೈತರ, ಮಠಾಧೀಶರ ಹಾಗೂ ಜನಸಾಮಾನ್ಯರ ಮೇಲಿನ ದೌರ್ಜನ್ಯ ನಿವಾರಣೆಗೊಳಿಸಲು ಮತ್ತು ವಿವಾದಿತ ಯೋಜನೆಯ ನಿಜವಾದ ತಾಂತ್ರಿಕ ಅಂಶಗಳ ಮೇಲೆ ಚರ್ಚಿಸಲು ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ತಕ್ಷಣ ಏರ್ಪಡಿಸುವಂತೆ ಒತ್ತಾಯಿಸಿದ್ದಾರೆ.

ಈ ಸಭೆಗೆ ತಾಂತ್ರಿಕ ತಜ್ಞರನ್ನು ಮತ್ತು ಈ ಹಿಂದೆ ಯೋಜನೆಯ ಕಾರ್ಯಸಾಧ್ಯತೆ ಇಲ್ಲವೆಂದು ಈಗ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಒಪ್ಪಿಗೆ ನೀಡಿರುವ ಅಧಿಕಾರಿಗಳನ್ನು ಸಹ ಈ ಸಭೆಯಲ್ಲಿ ಹಾಜರಿರುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.

V. Somanna
ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com