ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ: ಮೃತಪಟ್ಟ ಅಭಿಮಾನಿಗಳ ವಿವರ...

ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ.
Scene after Bengaluru stampede
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಜನದಟ್ಟಣೆ ಮತ್ತು ಕಾಲ್ತುಳಿತ ನಂತರದ ದೃಶ್ಯ
Updated on

ಬೆಂಗಳೂರು: 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ (IPL) ಟ್ರೋಪಿ ಎತ್ತಿಹಿಡಿದ ಸಂಭ್ರಮವನ್ನು ಬೆಂಗಳೂರಿನಲ್ಲಿ ಸರ್ಕಾರ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಚರಿಸಲಾಯಿತು.

ಐಪಿಎಲ್ ಟ್ರೋಫಿ ಗೆದ್ದು ಬಂದ ಕಲಿಗಳನ್ನು ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಲ್ಲಿಸಿ ಸರ್ಕಾರದ ಪ್ರತಿನಿಧಿಗಳು ಹೂವಿನ ಹಾರಹಾಕುತ್ತಿದ್ದರೆ, ಅಲ್ಲಿಂದ ಕೂಗಳತೆ ದೂರದಲ್ಲೇ ಇರುವ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ಕಾಲ್ತುಳಿತದಿಂದಾಗಿ (Bangalore Stampede) ಆರ್​ಸಿಬಿ ಅಭಿಮಾನಿಗಳ ಮಾರಣಹೋಮವೇ ನಡೆದುಹೋಯಿತು.

ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ.

Scene after Bengaluru stampede
ವಿಜಯೋತ್ಸವ ಮೆರವಣಿಗೆ ಗೊಂದಲ, ಉಚಿತ ಪಾಸ್, ಜನದಟ್ಟಣೆ ಬೆಂಗಳೂರು ಕಾಲ್ತುಳಿತಕ್ಕೆ ಕಾರಣವಾಯಿತೇ; ಪೊಲೀಸರು ಏನಂತಾರೆ?

ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ ಹೀಗಿದೆ:

ಭೂಮಿಕ್, 20 ವರ್ಷ (ನೆಲಮಂಗಲ)

ಸಹನ 19 ವರ್ಷ (ಕೋಲಾರ)

ಪೂರ್ಣಚಂದ, 32 ವರ್ಷ (ಮಂಡ್ಯ)

ಚಿನ್ಮಯಿ, 19 ವರ್ಷ

ದಿವ್ಯಾಂಶಿ, 13 ವರ್ಷ

ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ)

ದೇವಿ, 29 ವರ್ಷ

ಶಿವಲಿಂಗ್, 17 ವರ್ಷ

ಮನೋಜ್, 33 ವರ್ಷ (ತುಮಕೂರು)

ಅಕ್ಷತಾ, (ಮಂಗಳೂರು)

ಮತ್ತೊಬ್ಬರ ಹೆಸರು ಪತ್ತೆಯಾಗಿಲ್ಲ, 20 ವರ್ಷ, ವೈದೇಹಿ ಆಸ್ಪತ್ರೆ

ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.

ಗಾಯಾಳುಗಳ ವಿವರ: ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ (ವಿಕ್ರಂ ಆಸ್ಪತ್ರೆ)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com