ಮಂಗಳೂರು: ನೇತ್ರಾವತಿ ನದಿಯಲ್ಲಿ ಬಿಜೆಪಿ ಮುಖಂಡನ ಶವ ಪತ್ತೆ; ಸಾವಿನ ಸುತ್ತ ಅನುಮಾನಗಳ ಹುತ್ತ

ಯಾರೋ ನದಿಗೆ ಹಾರಿರಬಹುದು ಎಂಬ ಶಂಕೆಯಿಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ ಇಂದು ಮಂಗಳೂರಿನ ಸೇತುವೆ ಬಳಿ ನೀರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
Ramesh Rai
ರಮೇಶ್ ರೈ
Updated on

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಅವರು ಗುರುವಾರ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಬಳಿ ರಮೇಶ್ ರೈ ಅವರ ಮೊಬೈಲ್ ಮತ್ತು ಬೈಕ್ ಪತ್ತೆಯಾಗಿತ್ತು.

ಯಾರೋ ನದಿಗೆ ಹಾರಿರಬಹುದು ಎಂಬ ಶಂಕೆಯಿಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ ಇಂದು ಮಂಗಳೂರಿನ ಸೇತುವೆ ಬಳಿ ನೀರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

Ramesh Rai
ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!

ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯರಾಗಿದ್ದ ರಮೇಶ್ ರೈ ಅವರು ಇತ್ತೀಚಿಗೆ ನಗರಸಭೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com