
ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್'ಪಿವರೆಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆಜೆ.ಜಾರ್ಜ್ ಅವರು ಬುಧವಾರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸೆಸ್ಕ್ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೃಷಿ ಪಂರ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ. ರೈತರಿಗೆ ಎಷ್ಟು ವಿದ್ಯುತ್ ಪೂರೈಸಲಾಗುತ್ತಿದೆ ಮತ್ತು ಎಷ್ಟು ಸಂಪರ್ಕಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕೃಷಿ ಪಂಬ್ ಸೆಟ್ ಗಳಿಗೆ 10 ಹೆಚ್'ಪಿ ವರೆಗೆ ಉಚಿತ ವಿದ್ಯುತ್ ಮುಂದುವರೆಯುವುದರ ಜೊತೆಗೆ 7 ಗಂಟೆ ಸಮಪರ್ಕ ವಿದ್ಯುತ್ ಕೂಡ ಪೂರೈಕೆಯಾಗಲಿದೆ. ಇದರಲ್ಲಿ ಅನುಮಾನ ಬೇಡ. ಮುಖ್ಯಮಂತ್ರಿಗಳು ಇತ್ತೀಚೆಗೆ ಹಾಡಿಗಳಿಗೆ ಭೇಟಿ ನೀಡಿದ ಬಳಿಕ ಅವುಗಳಿಗೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಮೂಲಸೌಕರ್ಯ ನಿರ್ಮಿಸಲಾಗಿದೆ. 600 ಹೆಚ್ಚು ಹಾಡಿ ಮನೆಗಳಿಗೆ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿರುವ ಎಲ್ಲಾ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು 3 ತಿಂಗಳಲ್ಲಿ ಸಕ್ರಮಗೊಳಿಸಲಾಗುವುದು. ಮೈಸೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು 4.5 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳಿದ್ದು, ಅದರಲ್ಲಿ ಈಗಾಗಲೇ 2.5 ಲಕ್ಷ ಕೃಷಿ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ. ಬಾಕಿ ಇರುವ 2 ಲಕ್ಷ ಕೃಷಿ ಪಂಪ್ ಸೆಟ್‌ಗಳನ್ನು ಶೀಘ್ರದಲ್ಲಿಯೇ ಸಕ್ರಮಗೊಳಿಸಲಾಗುವುದು ಎಂದರು.
ವಿದ್ಯುತ್ ಮಾರ್ಗದಿಂದ 500 ಮೀ.ಅಂತರದೊಳಗೆ ಇದ್ದರೆ ಆದಷ್ಟು ಬೇಗ ಸಕ್ರಮಗೊಳಿಸಲಾಗುವುದು. ಇಲ್ಲದೇ ಇದ್ದರೆ ರೈತರು ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ಸಕ್ರಮ ಮಾಡಿಕೊಳ್ಳಬಹುದು ಎಂದು ಹೇಳಿದರು.
‘ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಮಾರ್ಗವನ್ನು ಬದಲಿಸಲಾಗುವುದು. ಇದರೊಂದಿಗೆ ಬೇರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗವನ್ನು ಬದಲಿಸುವ ಕಾರ್ಯ ನಡೆಸಲಾಗುವುದು. ಈ ಸಂಬಂಧ ನಾಳೆ ಸೆಸ್ಕ್ ಅಕಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಕಾರ ಮತ್ತು ವಿಮಾನ ನಿಲ್ದಾಣ ಪ್ರಾಕಾರದ ಅಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.
ಹೆಚ್ಚುವರಿ ವಿದ್ಯುತ್ ಬೇಡಿಕೆ ಹಿನ್ನೆಲೆಯಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 44 ಉಪ ವಿದ್ಯುತ್ ಕೇಂದ್ರಗಳನ್ನು ಆರಂಭಿಸಲಾಗುವುದು.‘ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಹೆಚ್ಚುವರಿಯಾಗಿ ವಿದ್ಯುತ್ ಸಿಗುತ್ತಿದೆ. ಜತೆಗೆ ಬೇಡಿಕೆಯು ಹೆಚ್ಚಾಗುತ್ತಿರುವುದರಿಂದ ಇಡೀ ರಾಜ್ಯದಲ್ಲಿ100 ಸಬ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಮೈಸೂರಿನಲ್ಲಿಯೂ 44 ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಕೇಂದ್ರಗಳ ಸ್ಥಾಪನೆಗೆ ಅಗತ್ಯ ಭೂಮಿಯನ್ನು ನೀಡುವಂತೆ ಜಿಲ್ಲಾಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿಕುಸುಮ್ ಸಿ ಯೋಜನೆಯಡಿ 2500 ಮೆಗಾವ್ಯಾಟ್ ವಿದ್ಯುತ್ ಅನ್ನು ಸೌರ ಶಕ್ತಿಯಿಂದ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಜೂ. 11ರಂದು ಗೌರಿ ಬಿದನೂರಿನಲ್ಲಿನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ. ಮೈಸೂರಿನಲ್ಲಿಸಹ 175 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಹಗಲಿನ ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು.
ಇಂಧನ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಸಮಸ್ಯೆಗಳನ್ನು ಆಲಿಸುವ ಕಾರ್ಯದೊಂದಿಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಸ್ಥಳೀಯ ಚುನಾಯಿತ ಪ್ರತಿನಿಗಳೊಂದಿಗೆ ಸಭೆ ನಡೆಸುತ್ತಿರುವುದರಿಂದ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು
Advertisement