ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್

ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು.
ಸಿಎಂ ಸಿದ್ದರಾಮಯ್ಯ, ಪರಮೇಶ್ವರ್
ಸಿಎಂ ಸಿದ್ದರಾಮಯ್ಯ, ಪರಮೇಶ್ವರ್
Updated on

ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳ ಸದಸ್ಯರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯೆ ನೀಡಿದರು,

ನಾವು ಯಾರನ್ನು ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರು ಆತಂಕ ಪಡಬೇಕಿಲ್ಲ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಯಾರು ಕಾನೂನು ಮತ್ತು ಜನ ಸಮುದಾಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಅವರಿಗೆ ಆತಂಕವಿರಬಹುದು. ಅದನ್ನು ಬಿಟ್ಟರೆ ಸಾಮಾನ್ಯ ಜನರಿಗೆ ತೊಂದರೆಯಾಗುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ, ಪರಮೇಶ್ವರ್
ಹಿಂದೂಗಳ ಗುರಿಯಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚಿಸಿದೆ: BJP

ಕರಾವಳಿ ಭಾಗದಲ್ಲಿ ಇನ್ನು ಕೂಡ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿರಬಹುದು. ಕರ್ತವ್ಯ ಹಿನ್ನೆಲೆಯಲ್ಲಿ ಪೊಲೀಸರು ರಾತ್ರಿ ಗಸ್ತು ತಿರುಗುತ್ತಾರೆ. ಪ್ರಸ್ತುತ ಪರಿಸ್ಥಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುವುದು ಹೆಚ್ಚಾಗಿದೆ. ಈ ವೇಳೆ ಮನೆಮನೆಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಗಲಭೆ ಹಬ್ಬಿಸುವವರು ಇದ್ದರೆ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂದರು.

ಈಗಾಗಲೇ ತೀರ್ಮಾನ ಮಾಡಿದಂತೆ ಕೋಮುಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಜವಾಬ್ದಾರಿ ಸರಕಾರಕ್ಕೆ ಇದೆ. ಅದಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾನಾಗಲಿ ಅಥವಾ ಮುಖ್ಯಮಂತ್ರಿಯವರಾಗಲಿ ಪೊಲೀಸ್ ಅಧಿಕಾರಿಗಳಿಗೆ ದಿನನಿತ್ಯ ಗಂಟೆಗೊಮ್ಮೆ ಸೂಚನೆಗಳನ್ನು ಕೊಡುವುದಿಲ್ಲ. ಏನಾದರು ಘಟನೆಗಳು ನಡೆದಾಗ ಅಧಿಕಾರಿಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com