ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ RCB ತಲಾ ₹10 ಲಕ್ಷ ಪರಿಹಾರ ಘೋಷಣೆ

ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಈ ವೇಳೆ ದುರಂತ ಘಟನೆ ಸಂಭವಿಸಿದೆ.
ಆರ್‌ಸಿಬಿ
ಆರ್‌ಸಿಬಿ
Updated on

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದೆ.

ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಈ ವೇಳೆ ದುರಂತ ಘಟನೆ ಸಂಭವಿಸಿದೆ. ಘಟನೆಯಲ್ಲಿ 11 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್‌ಸಿಬಿ, 'ಬೆಂಗಳೂರಿನಲ್ಲಿ ನಿನ್ನೆ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಘಟನೆಯಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ' ಎಂದು ಹೇಳಿದೆ.

ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು 'ಆರ್‌ಸಿಬಿ ಕೇರ್ಸ್' ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಾವು ಮಾಡುವ ಪ್ರತಿಯೊಂದು ಕೆಲಸದಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ. ಈ ದುಃಖದ ಸಂದರ್ಭದಲ್ಲಿ ನಾವು ಒಗ್ಗಟ್ಟಿನಿಂದ ಇರುತ್ತೇವೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com