ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

RCB ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಕಾಲ್ತುಳಿತ: ಕೂಲಂಕುಷ ತನಿಖೆಗೆ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಸೂಚನೆ

ದುರಂತದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
Published on

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ದುರಂತದ ಕುರಿತು ನನಗೆ ವಿಷಾದವಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ದುರಂತದ ಬಗ್ಗೆ ಸರ್ಕಾರ ಕೂಲಂಕಷ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ದುರಂತದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಘಟನೆಗೆ ಕಾರಣವಾದ ಲೋಪಗಳನ್ನು ಕೂಲಂಕಷವಾಗಿ ತನಿಖೆ ಮಾಡಿ ಸರ್ಕಾರ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಿಸಲು ಬುಧವಾರ ಕಾರ್ಯಕ್ರಮ ಆಯೋಜಿಲಾಗಿತ್ತು. ಈ ವೇಳೆ ಆರ್​ಸಿಬಿ ಆಟಗಾರರನ್ನು ನೋಡಲು ಜನರು ಮುಗಿ ಬಿದ್ದದ್ದು, ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 47 ಮಂದಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Watch | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ; 10 ಆರ್‌ಸಿಬಿ ಅಭಿಮಾನಿಗಳ ಸಾವು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com