ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್​ ಮುಖ್ಯಸ್ಥ ಸೇರಿ ನಾಲ್ವರ ಬಂಧನ; Video

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
Nikhil Sosale
ಬಂಧಿತ ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ನಿಖಿಲ್​ ಸೋಸಲೆ
Updated on

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ​​​ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಮುಂಬೈಗೆ ತೆರಳುತ್ತಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಬಂಧಿತರಾಗಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿರುವುದು.

ಸ್ಟೇಡಿಯಂನಲ್ಲಿ ಸೆಲೆಬ್ರೇಷನ್​ಗೆ ಉಚಿತ ಟಿಕೆಟ್ ಎಂದು ಘೋಷಿಸಿದ್ದು, ಗೇಟ್ 9 ಮತ್ತು 10ರ ಬಳಿ ಮಧ್ಯಾಹ್ನ 1 ಗಂಟೆಗೆ ಟಿಕೆಟ್ ಸಿಗುತ್ತದೆ ಎಂದು, 1 ಗಂಟೆ ಆದರೂ ಟಿಕೆಟ್ ವಿತರಣೆ ಆಗದಿರುವುದು. ಬಳಿಕ ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವೇಶ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಕಾರಣಕ್ಕೆ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

Nikhil Sosale
ರಾತ್ರೋ ರಾತ್ರಿ ನೂತನ ಪೊಲೀಸ್ ಆಯುಕ್ತರ ನೇಮಕ: ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com