ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವು

ಇಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ.
Representational image
ಸಾಂದರ್ಭಿಕ ಚಿತ್ರ
Updated on

ತುಮಕೂರು: ಜಿಲ್ಲೆಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.

ಇಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ಬೈಕ್​ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

Representational image
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ CIDಗೆ ವರ್ಗ: RCB, KSCA, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವಿರುದ್ಧ FIR ದಾಖಲು

ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್​​​ಪಿ ಗೋಪಾಲ್, ಡಿವೈಎಸ್​​ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com