
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ತಮ್ಮವರನ್ನು ಕಳೆದುಕೊಂಡು ನೊಂದಿರುವ ಕುಟುಂಬಗಳು ಆರ್ಥಿಕ ಸಮಸ್ಯೆಗಳಿಂದಾಗಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಿರಲಿ ಎನ್ನುವುದು ನಮ್ಮ ಸರ್ಕಾರದ ಆಶಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ (IPL) ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದು 47ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement