ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ; ನ್ಯಾ. ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚನೆ!

ಜೂನ್ 5 ರಂದು ಈ ತನಿಖಾ ಆಯೋಗವನ್ನು ರಚನೆ ಮಾಡಲಾಗಿದ್ದು, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶಿಸಿದೆ.
Bengaluru stampede
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ
Updated on

ಬೆಂಗಳೂರು: ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ಸಂದರ್ಭದಲ್ಲಿ 11 ಮಂದಿ ಆರ್'ಸಿಬಿ ಅಭಿಮಾನಿಗಳನ್ನು ಬಲಿ ಪಡೆದ, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಇದರಂತೆ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚನೆ ಮಾಡಿದೆ.

ಜೂನ್ 5 ರಂದು ಈ ತನಿಖಾ ಆಯೋಗವನ್ನು ರಚನೆ ಮಾಡಲಾಗಿದ್ದು, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

ಕೋವಿಡ್ ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ನಂತರ ವಿಚಾರಣಾ ಆಯೋಗದ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿತ್ತು, ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 30 ರವರೆಗೆ ವಿಸ್ತರಣೆ ಮಾಡಿತ್ತು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಖರೀದಿಯಲ್ಲಿನ ಅಕ್ರಮಗಳು ಮತ್ತು ದುರುಪಯೋಗದಿಂದಾಗಿ ಸಂಭವಿಸಿದ ಸರಣಿ ಸಾವುಗಳ ಪ್ರಕರಣವನ್ನು ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವ ಆಯೋಗ ತನಿಖೆ ನಡೆಸುತ್ತಿದೆ.

Bengaluru stampede
ಬೆಂಗಳೂರು ಕಾಲ್ತುಳಿತ ಪ್ರಕರಣ: ಅಖಾಡಕ್ಕಿಳಿದ CID; ಬಂಧಿತ ನಾಲ್ವರು ಶೀಘ್ರದಲ್ಲೇ ವಶಕ್ಕೆ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com