
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 61 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 955ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು ಒಟ್ಟು 325 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 61 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 423 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 416 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇದುವರೆಗೆ 9 ಜನ ಮೃತಪಟ್ಟಿದ್ದಾರೆ.
ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.
Advertisement