
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ.
ಈ ವೇಳೆ ತೀವ್ರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಗಾಯಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಮೃತಪಟ್ಟಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
Advertisement