
ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ. ಅಥಣಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಬೆಳಗಾವಿಯ ಅಥಣಿ ತಾಲೂಕಿನ ದರೂರು ಗ್ರಾಮದ ಬಳಿ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಕ್ಷ್ಮಣ್ ಸವದಿ ಕಾರಿನ ಮುಂಭಾಗ ಜಖಂಗೊಂಡಿದ್ದು ಲಕ್ಷ್ಮಣ್ ಸವದಿ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement