ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಮೀಕ್ಷೆಯ ಅವಧಿ ಮತ್ತೆ ವಿಸ್ತರಣೆ, ಸಮೀಕ್ಷೆಯಲ್ಲಿ ಭಾಗವಹಿಸದವರು B1-K1 ಕೇಂದ್ರಗಳಿಗೆ ಭೇಟಿ ನೀಡಲು ಅವಕಾಶ!

ಈಗಾಗಲೇ ಜೂ.6ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.10ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ. ಆದ್ದರಿಂದ ಸಮೀಕ್ಷೆಯ ಅವಧಿಯನ್ನು ಜೂ.22ರ ವರೆಗೆ ವಿಸ್ತರಣೆ ಮಾಡಲಾಗಿದೆ.
Justice HN Nagamohan Das
ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ ದಾಸ್
Updated on

ಬೆಂಗಳೂರು: ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಈಗಾಗಲೇ ಜೂ.6ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.10ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ. ಆದ್ದರಿಂದ ಸಮೀಕ್ಷೆಯ ಅವಧಿಯನ್ನು ಜೂ.22ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿದ್ದಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ. ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರಿಕ ಸೇವಾ ಕೇಂದ್ರಗಳಾದ, "ಕರ್ನಾಟಕ ಒನ್", 'ಬೆಂಗಳೂರು ಒನ್" ಹಾಗೂ 198 ಬಿಬಿಎಂಪಿ ವಾರ್ಡ್ ಕಚೇರಿ"ಗಳಿಗೆ ಭೇಟಿ ನೀಡಿ 2025ನೇ ಜೂನ್ 22ರ ವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ. ಜೊತೆಗೆ ಆನ್ ಲೈನ್ ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration ಲಿಂಕ್ ಮೂಲಕ 2025ನೇ ಜೂನ್ 22ರ ವರೆಗೆ ತಮ್ಮ ವಿವರಗಳನ್ನು ನೀಡಬಹುದು ಎಂದು ಆಯೋಗ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

Justice HN Nagamohan Das
ಒಳಮೀಸಲಾತಿ ಜಾತಿ ಗಣತಿ: ಪಾಲಿಕೆ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯ ಕುಂಠಿತ, ಕ್ರಮಕ್ಕೆ BBMP ಮುಂದು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com