'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಂಬಲ

ಸದಾ ಕಾಲ ಚುನಾವಣೆ ನಡೆಯುವುದರಿಂದ ಏನೆಲ್ಲಾ ಸಮಸ್ಯೆ ಆಗುತ್ತದೆ ಎಂಬುದರ ಬಗ್ಗೆ ನನ್ನ ಅನುಭವವನ್ನೇ ನಿಮ್ಮ ಮುಂದೆ ಇರಿಸುತ್ತೇನೆ.
Shivaraj Singh Chouhan during the launch of Viksit Krishi Sankalp Abhiyan
ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಶಿವರಾಜ್ ಸಿಂಗ್ ಚೌಹಾಣ್
Updated on

ಬೆಂಗಳೂರು: ದೇಶದಲ್ಲಿ ಒಂದಿಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ. ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ ಪರಿಹಾರ. ಇದನ್ನು ಎಲ್ಲರೂ ಬೆಂಬಲಿಸಬೇಕು. ಇದಕ್ಕಾಗಿ ಸಾರ್ವಜನಿಕರೇ ಅಭಿಯಾನ ನಡೆಸಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಹೇಳಿದ್ದಾರೆ.

ಒಂದು ದೇಶ, ಒಂದು ಚುನಾವಣೆ ಕುರಿತು ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳ ಜತೆಗೆ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಸದಾ ಕಾಲ ಚುನಾವಣೆ ನಡೆಯುವುದ ರಿಂದ ಏನೆಲ್ಲಾ ಸಮಸ್ಯೆ ಆಗುತ್ತದೆ ಎಂಬುದರ ಬಗ್ಗೆ ನನ್ನ ಅನುಭವವನ್ನೇ ನಿಮ್ಮ ಮುಂದೆ ಇರಿಸುತ್ತೇನೆ.

2023ರಲ್ಲಿ ನಾನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಆಗಿದ್ದೆ. ಅದೇ ವರ್ಷದ ಸೆಪ್ಟೆಂಬರ್‌ನಿಂದಲೇ ಮಧ್ಯ ಪ್ರದೇಶ ವಿಧಾನಸಭೆಯ ಚುನಾವಣಾ ಪ್ರಕ್ರಿಯೆಗಳು ಆರಂಭವಾದವು. . ಆ 4 ತಿಂಗಳು ಯಾವುದೇ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಚುನಾವಣೆ ಮುಗಿದು, ಹೊಸ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಯಿತು ಎಂದರು.

ಲೋಕಸಭಾ ಚುನಾವಣೆ ಮುಗಿದು, ಮೋದಿ ಅವರು ಮತ್ತೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ನಾನೂ ಕೃಷಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಸಚಿವಾಲಯದ ಕೆಲಸಗಳನ್ನು ಅರ್ಥ ಮಾಡಿಕೊಳ್ಳುವ ವೇಳೆಗೆ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ವೀಕ್ಷಕರಾಗಿ ಹೋಗುವಂತೆ ಸೂಚಿಸಿದರು. ಒಂದಿಡೀ ವರ್ಷ ಕೆಲಸ ಮಾಡಲು ಆಗಲಿಲ್ಲ. ಅದೇ ಸಂದರ್ಭದಲ್ಲಿ ಸರ್ಕಾರವೂ ಕೆಲಸ ಮಾಡಲಾಗಲಿಲ್ಲ ಎಂದರು.

Shivaraj Singh Chouhan during the launch of Viksit Krishi Sankalp Abhiyan
'ಒಂದು ರಾಷ್ಟ್ರ ಒಂದು ಚುನಾವಣೆ' ಸಮಿತಿಯ ಅವಧಿ ವಿಸ್ತರಿಸಿದ ಲೋಕಸಭೆ

ಈ ಸಮಸ್ಯೆಯ ನಿವಾರಣೆಗೆ ಒಂದು ದೇಶ, ಒಂದು ಚುನಾವಣೆಯೇ ಪರಿಹಾರ. ಒಂದೇ ಮತಗಟ್ಟೆಯಲ್ಲಿ ಲೋಕಸಭಾ ಚುನಾವಣೆಗೆ ಒಂದು ಮತಯಂತ್ರ, ವಿಧಾನಸಭಾ ಚುನಾವಣೆಗೆ ಇನ್ನೊಂದು ಮತಯಂತ್ರ ಇರಿಸಿದರೆ ಸಮಸ್ಯೆ ಏನು? ಈ ಪ್ರಶ್ನೆಯನ್ನು ನೀವೂ ಕೇಳಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಲೋಕಸಭೆಯಿಂದ ವಿಧಾನಸಭೆಯವರೆಗಿನ ಎಲ್ಲಾ ಚುನಾವಣೆಗಳು ಒಟ್ಟಿಗೆ ನಡೆದರೆ, ಸಚಿವರು ಮತ್ತು ಪಕ್ಷದ ಕಾರ್ಯಕರ್ತರು ಉಳಿದ ನಾಲ್ಕರಿಂದ ಐದು ವರ್ಷಗಳನ್ನು ಸಂಪೂರ್ಣವಾಗಿ ಸಾರ್ವಜನಿಕ ಸೇವೆಗೆ ಮೀಸಲಿಡಲು ಸಾಧ್ಯವಾಗುತ್ತದೆ ಎಂದು ಅವರು ವಾದಿಸಿದರು.

ನಮ್ಮ ದೇಶವು ಪ್ರತಿ ಕೆಲವು ತಿಂಗಳಿಗೊಮ್ಮೆ ಕೋಟ್ಯಂತರ ರೂಪಾಯಿಗಳು, ಸರ್ಕಾರಿ ಯಂತ್ರೋಪಕರಣಗಳು ಮತ್ತು ಪಕ್ಷದ ನಿಧಿಯನ್ನು ಏಕೆ ವ್ಯರ್ಥ ಮಾಡುತ್ತಲೇ ಇರಬೇಕು? ಮತದಾರರ ಪಟ್ಟಿಯನ್ನು ನವೀಕರಿಸುವುದು ಸಹ ಒಂದು ದೊಡ್ಡ ಕೆಲಸ. ತದನಂತರ, ಪ್ರಚಾರ ಮತ್ತು ಸಜ್ಜುಗೊಳಿಸುವಿಕೆ ಬರುತ್ತದೆ" ಎಂದು ಸಚಿವರು ಹೇಳಿದರು. ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಸಹ ಒಂದು ಆಂದೋಲನಕ್ಕೆ ಸೇರಬೇಕೆಂದು ಕೇಂದ್ರ ಸಚಿವರು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com