ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜುಲೈ 1ರಿಂದ ಹೊಸ ನಿಯಮ ಜಾರಿಗೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆ ಇ-ಖಾತಾವನ್ನು ಆನ್‌ಲೈನ್‌ ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ.
BBMP
ಬಿಬಿಎಂಪಿ
Updated on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.

ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆ ಇ-ಖಾತಾವನ್ನು ಆನ್‌ಲೈನ್‌ ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.

ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.

ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

BBMP
ಅನಧಿಕೃತ ಬಡಾವಣೆ: ಗ್ರಾಮೀಣ ಪ್ರದೇಶಗಳ ನಿವೇಶನ ಮಾಲೀಕರಿಗೆ 'ಬಿ ಖಾತಾ' ನೀಡಲು ಸರ್ಕಾರ ಚಿಂತನೆ!

5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ

ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್ ತಿಳಿಸಿದ್ದಾರೆ.

25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್‌ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್‌ಲೈನ್‌ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com