ಕಾಲ್ತುಳಿತ ಪ್ರಕರಣ: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಮಧ್ಯಂತರ ರಿಲೀಫ್ ನಿರಾಕರಿಸಿದ ಹೈಕೋರ್ಟ್

ನ್ಯಾಯಾಲಯವು ಅವರ ಅರ್ಜಿಯ ಮೇಲಿನ ಆದೇಶವನ್ನು ಜೂನ್ 11 ರವರೆಗೆ ಕಾಯ್ದಿರಿಸಿದೆ.
Nikhil Sosale
ಬಂಧಿತ ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ನಿಖಿಲ್​ ಸೋಸಲೆ
Updated on

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟ ಪ್ರಕರಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಲು ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

ನ್ಯಾಯಾಲಯವು ಅವರ ಅರ್ಜಿಯ ಮೇಲಿನ ಆದೇಶವನ್ನು ಜೂನ್ 11 ರವರೆಗೆ ಕಾಯ್ದಿರಿಸಿದೆ.

ತಮ್ಮ ಬಂಧನವನ್ನು ಕಾನೂನುಬಾಹಿರ ಎಂದು ಆರೋಪಿಸಿ ನಿಖಿಲ್ ಸೋಸಲೆ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಪೊಲೀಸ್ ಕ್ರಮವು ರಾಜಕೀಯ ನಿರ್ದೇಶನಗಳಿಂದ ಪ್ರಭಾವಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Nikhil Sosale
ಕಾಲ್ತುಳಿತ: ಜೂನ್ 12ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್; ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸೂಚನೆ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 6ರಂದು ಆರ್‌ಸಿಬಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯು, ಕಿರಣ್ ಮತ್ತು ಸುಮಂತ್ ಎಂಬುವವರನ್ನು ಕೇಂದ್ರ ಅಪರಾಧ ದಳ (CCB) ಬಂಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com