ಹಂಪಿ: ಕಳೆದ ಮೂರು ದಿನಗಳಲ್ಲಿ 55,000 ಪ್ರವಾಸಿಗರು ಭೇಟಿ!

ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಆಗಮಿಸುತ್ತಿದ್ದು, ಹಂಪಿಯ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ ಎಂದು ತಿಳಿಸಿದರು.
Hampi
ಹಂಪಿ
Updated on

ಹಂಪಿ: ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಕಳೆದ ಮೂರು ದಿನಗಳಲ್ಲಿ 55,000 ಪ್ರವಾಸಿಗರು ಭೇಟಿ ನೀಡಿದ್ದಾರೆ. ಭಾರೀ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ನೆಚ್ಚಿಕೊಂಡಿರುವವರಿಗೂ ಅನುಕೂಲವಾಗಿದೆ.

ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಆಗಮಿಸುತ್ತಿದ್ದು, ಹಂಪಿಯ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ ಎಂದು ತಿಳಿಸಿದರು.

ವಿಜಯ ವಿಠಲ ದೇವಸ್ಥಾನ, ವಿರೂಪಾಕ್ಷ ದೇವಸ್ಥಾನ, ಮಾತಂಗ ಕಿಲ್ಸ್, ಉಗ್ರ ನರಸಿಂಹ ಮತ್ತಿತರ ಅನೇಕ ಸ್ಥಳಗಳು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ವಿಪರೀತ ಜನದಟ್ಟಣೆಯಿಂದಾಗಿ ಸ್ಥಳೀಯ ವ್ಯಾಪಾರ ಬಿರುಸುಗೊಂಡಿದ್ದು, ಪ್ರವಾಸಿಗರಿಗೆ ಹಂಪಿ ಹಾಗೂ ಇಲ್ಲಿನ ಸ್ಮಾರಕಗಳ ಬಗ್ಗೆ ವಿವರ ಒದಗಿಸಲಾಗುವುದು ಎಂದು ಅವರು ಹೇಳಿದರು.

ಹಂಪಿ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿಗೆ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ವಿಜಯನಗರ ಜಿಲ್ಲಾ ಪೊಲೀಸರು ಜನಸಂದಣಿಯನ್ನು ನಿಭಾಯಿಸಲು ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ಪೊಲೀಸರ ಜನಸ್ನೇಹಿ ಗುಣವನ್ನು ಹಲವರು ಶ್ಲಾಘಿಸಿದರು. ಸಾಮಾನ್ಯವಾಗಿ ಪ್ರತಿ ವರ್ಷ ಮುಂಗಾರು ಮಳೆಯಿಂದಾಗಿ ಜೂನ್‌ನಿಂದ ಆಗಸ್ಟ್‌ವರೆಗೆ ಜನಸಂದಣಿ ಕಡಿಮೆ ಇರುತ್ತದೆ, ಆದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನಸಂದಣಿ ಇತ್ತು.

ಪ್ರವಾಸಿಗರಿಗೆ ಹಲವು ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಿದ್ದೇವೆ. ಈಗಾಗಲೇ ಸಾಕಷ್ಟು ಕುಡಿಯುವ ನೀರಿನ ಘಟಕ, ಶೌಚಾಲಯ, ವಾಹನ ನಿಲುಗಡೆಗೆ ಅವಕಾಶವಿದೆ. ಹಂಪಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಿದ್ದೇವೆ ಎಂದು ವಿಜಯನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

Hampi
ಹಂಪಿ: ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ: ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣೆ

ಕಳೆದ ಮೂರು ದಿನಗಳಲ್ಲಿ ಪ್ರವಾಸಿಗರು ಸ್ಮಾರಕಗಳು, ಸುತ್ತಮುತ್ತಲಿನ ಬೆಟ್ಟಗಳನ್ನು ವೀಕ್ಷಿಸಿ ಆನಂದಿಸಿದರು. ಬಹುತೇಕ ಎಲ್ಲಾ ಹೋಂಸ್ಟೇಗಳು ಪ್ರವಾಸಿಗರಿಂದ ತುಂಬಿದ್ದವು. ಆದಾಗ್ಯೂ, ಕೆಲವು ಪ್ರವಾಸಿಗರು ಸರಿಯಾದ ಮೂಲಭೂತ ಸೌಕರ್ಯ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com