Rowdy Sheeter Puneeth
ರೌಡಿ ಶೀಟರ್ ಪುನೀತ್

ಬೆಂಗಳೂರು: ಹಳೆಯ ದ್ವೇಷ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ!

ಪುನೀತ್ ಅಲಿಯಾಸ್ ನೇಪಾಳಿ ಎನ್ನುವ ರೌಡಿಶೀಟರ್ ಹತ್ಯೆಯಾಗಿದೆ.
Published on

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ.

ಪುನೀತ್ ಅಲಿಯಾಸ್ ನೇಪಾಳಿ ಎನ್ನುವ ರೌಡಿಶೀಟರ್ ಹತ್ಯೆಯಾಗಿದೆ. ನಿನ್ನೆ ರಾತ್ರಿ 9.45 ಗಂಟೆ ಸುಮಾರಿಗೆ ಶ್ರೀಕಾಂತ್ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ದಾಳಿಯಲ್ಲಿ ಪುನೀತ್ ಸ್ನೇಹಿತನಿಗೂ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ. ಹಳೆಯ ದ್ವೇಷದಿಂದ ಈ ಕೃತ್ಯ ಎಸಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಶ್ರೀಕಾಂತ್ ಹಾಗೂ ರೌಡಿಶೀಟರ್ ಪುನೀತ್ ನಡುವೆ ಆಗಾಗ ಕ್ಷುಲಕ ವಿಚಾರಕ್ಕೆ ಗಲಾಟೆ ನಡೆಯುತಿತ್ತು. ಶ್ರೀಕಾಂತ್‌ನನ್ನು ಕೊಲೆ ಮಾಡುವುದಾಗಿ ಪುನೀತ್ ಹೇಳಿಕೊಂಡು ಓಡಾಡುತ್ತಿದ್ದ. ಅದನ್ನೇ ಶ್ರೀಕಾಂತ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ಮಂಗಳವಾರ ರಾತ್ರಿ ಕಾಡುಗೋಡಿಯ ವಿಜಯಲಕ್ಷ್ಮೀ ಲೇಔಟ್ ಬಳಿ ಪುನೀತ್ ಇರುವಾಗ ಬೈಕ್‌ನಲ್ಲಿ ಬಂದ ನಾಲ್ವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Rowdy Sheeter Puneeth
ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಘಟನೆ ಸಂಬಂದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

X
Open in App

Advertisement

X
Kannada Prabha
www.kannadaprabha.com