ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದರ್ಶನಕ್ಕೆ 2000 ರೂ ವಿಶೇಷ ಟಿಕೆಟ್!

ಜೂ.27, ಜು.4, ಮತ್ತು ಜು.18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ.
Chamundeshwari Temple
ಚಾಮುಂಡೇಶ್ವರಿ ದೇವಾಲಯ
Updated on

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜೂನ್‌ 27ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ‘ವಿಶೇಷ ದರ್ಶನ’ ಟಿಕೆಟ್‌ ದರವನ್ನು ರೂ.300 ಹಾಗೂ ರೂ.2 ಸಾವಿರಕ್ಕೆ ನಿಗದಿಪಡಿಸಲಾಗಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜೂ.27, ಜು.4, ಮತ್ತು ಜು.18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾಸ್ ವ್ಯವಸ್ಥೆ ರದ್ದುಪಡಿಸಲಾಗಿದ್ದು, ಇದರ ಬದಲಿಗೆ ಉಚಿತ ಸಾರಿಗೆ ವ್ಯವಸ್ಥೆ ಎಂದಿನಂತೆಯೇ ಇರುತ್ತದೆ ಎಂದು ಹೇಳಿದರು.

ಬೆಟ್ಟದಲ್ಲಿ ನೂತನ ಮಾದರಿಯ ಸರದಿ ವ್ಯವಸ್ಥೆ ಮಾಡಲಾಗಿದೆ. ಧರ್ಮ ದರ್ಶನದ ಜೊತೆಗೆ ರೂ.300 ಹಾಗೂ ರೂ.2 ಸಾವಿರ ಟಿಕೆಟ್ ಪಡೆದವರಿಗೆ ಎಸಿ ಬಸ್ ನಲ್ಲಿ ಕರೆದೊಯ್ದು ಆದಷ್ಟು ಬೇಗ ದೇವರ ದರ್ಶನ ಮಾಡಿಸುವ ಜೊತೆಗೆ ಅವರಿಗೆ ಚಾಮುಂಡೇಶ್ವರಿಯ ಪ್ರಸಾದ, ತೀರ್ಥ, ನೀರಿನ ಬಾಟಲ್ ಮತ್ತು ಲಡ್ಡು ಚೀಲವನ್ನು ನೀಡಲಾಗುತ್ತದೆ. ಜೊತೆಗೆ ದೇವಾಲಯದ ಆವರಣಕ್ಕೆ ನೇರ ಪ್ರವೇಶವನ್ನು ನೀಡಲಾಗುವುದು ಎಂದು ತಿಳಿಸಿದರು.

ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಉದ್ದೇಶದಿಂದ ಬಟ್ಟೆ ಬ್ಯಾಗ್ ಬಳಸಲಾಗುತ್ತಿದೆ. ದೇವರ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರತಿ ಸಾಲಿನಲ್ಲಿ ಕಾಯುವವರಿಗೆ ಕುಡಿಯುವ ನೀರು ಮತ್ತು ಶೌಚಾಲಯ ಸೌಲಭ್ಯಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಜನಸಂದಣಿಯನ್ನು ನಿರ್ವಹಿಸಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶುಕ್ರವಾರದಿಂದ ಭಾನುವಾರದವರೆಗೆ ಬೆಟ್ಟದ ಮೇಲೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗುವುದು.

Chamundeshwari Temple
ಚಾಮುಂಡಿ ಬೆಟ್ಟ ಪ್ರಾಧಿಕಾರ: ರಾಜಮನೆತನ V/s​ ಸರ್ಕಾರ; ಸಭೆ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದ ಯದುವೀರ್

ಸಂದರ್ಶಕರಿಗೆ ಮಾರ್ಗದರ್ಶನ ನೀಡಲು ಮೂರು ಪ್ರಮುಖ ಸ್ಥಳಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಪ್ರೋಟೋಕಾಲ್ ವಾಹನಗಳನ್ನು ಹೊರತುಪಡಿಸಿ, ಗೊಂದಲವನ್ನು ತಪ್ಪಿಸಲು ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಯಾವುದೇ ವಿಐಪಿ ಅಥವಾ ವಿವಿಐಪಿ ಪಾಸ್‌ಗಳನ್ನು ನೀಡಲಾಗುವುದಿಲ್ಲ ಎಂದು ಹೇಳಿದರು.

ಧಾರ್ಮಿಕ ಸಂಪ್ರದಾಯಗಳನ್ನು ಸಂರಕ್ಷಿಸಲು ಮತ್ತು ಸಾರ್ವಜನಿಕ ಅನುಕೂಲವನ್ನು ಖಚಿತಪಡಿಸಿಕೊಳ್ಳಲು ಸಮನ್ವಯದಿಂದ ಕೆಲಸ ಮಾಡುವಂತೆ ದೇವಾಲಯದ ಅಧಿಕಾರಿಗಳು, ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳಿಗೆ ಸಚಿವರು ಇದೇ ವೇಳೆ ಸೂಚನೆ ನೀಡಿದರು.

ಜನಸಂದಣಿ ನಿಯಂತ್ರಣಕ್ಕಾಗಿ ಬೌನ್ಸರ್‌ಗಳನ್ನು ಬಳಸಬಾರದು ಮತ್ತು ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತೆ ಪೊಲೀಸರನ್ನು ಸೂಚಿಸಿದರು.

ಏತನ್ಮಧ್ಯೆ, ದೇವಾಲಯದ ಅಧಿಕಾರಿಗಳು ಲಡ್ಡು ಬೆಲೆಯನ್ನು 5 ರೂ. ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಇದಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com