
ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ (Caste Census Re-Survey) ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಿತು.
ಈ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಎಲ್ಲ ಸಚಿವರು ಒಪ್ಪಿಗೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
2011ರಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸಿದ್ದೆವು. ಮನೆಮನೆಗೆ ಹೋಗಿ ಸರ್ವೆ ಮಾಡಿ ವರದಿ ಪಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂತರಾಜು ಸರ್ವೆಯ ದತ್ತಾಂಶ ಪಡೆದು ಜಯಪ್ರಕಾಶ್ ಹೆಗ್ಡೆ ಅವರು ಶಿಫಾರಸು ಮಾಡಿದರು. 2024ರ ಫೆ.29ರಂದು ಸರ್ಕಾರಕ್ಕೆ ಜಯಪ್ರಕಾಶ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಸಂಸತ್ತು ಚುನಾವಣೆ ಕಾರಣದಿಂದ ವರದಿ ಚರ್ಚಿಸಲಿಲ್ಲ. ಬಳಿಕ ಸರ್ಕಾರ ವರದಿ ತೆಗೆದುಕೊಂಡು 2025 ರಲ್ಲಿ ಕ್ಯಾಬಿನೆಟ್ ಮುಂದೆ ಮಂಡಿಸಿದ್ದೇವೆ. ಸಚಿವರು ಅವರ ಅಭಿಪ್ರಾಯ ಕೊಟ್ಟಿದ್ದಾರೆ ಎಂದರು.
Advertisement