ಬೆಂಗಳೂರು: ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 11 ವರ್ಷದ ಬಾಲಕಿ ದಾರುಣ ಸಾವು

ಮೃತ ಬಾಲಕಿಯನ್ನು ನಾರಾಯಣಘಟ್ಟದ ​​ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
Tanishka S
ಮೃತ ಬಾಲಕಿ ತನಿಷ್ಕಾ ಎಸ್
Updated on

ಬೆಂಗಳೂರು: ನಗರದ ಹೊರವಲಯದ ಆನೇಕಲ್ ಬಳಿ ಮನೆಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತ ಬಾಲಕಿಯನ್ನು ನಾರಾಯಣಘಟ್ಟದ ​​ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಬಾಲಕಿ ತನ್ನ ಮನೆಯ ಹೊರಗೆ ಚೆಂಡಿನಿಂದ ಆಟವಾಡುತ್ತಿದ್ದಾಗ, ಮನೆ ಮುಂದೆ ಇದ್ದ ವಿದ್ಯುತ್ ಕಂಬದ ಬಳಿಗೆ ಚೆಂಡು ಹೋಗಿದೆ. ಅದನ್ನು ತೆಗೆದುಕೊಳ್ಳಲು ಕಂಬದ ಬಳಿ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕುಸಿದು ಬಿದ್ದಿದ್ದಾಳೆ.

ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Tanishka S
ತುಮಕೂರು: ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 5 ವರ್ಷದ ಬಾಲಕ ಸಾವು

ಅರ್ಥಿಂಗ್ (ಗ್ರೌಂಡಿಂಗ್) ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದೆ. ಮಳೆಯೂ ಬಂದಿದ್ದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರಬಹುದು. ಆದರೂ, ಇದನ್ನು ಪರಿಶೀಲಿಸಬೇಕಾಗಿದ್ದು, ಎಫ್‌ಎಸ್‌ಎಲ್ ತಂಡದ ತಜ್ಞರನ್ನು ಕರೆಸಿ ಸ್ಥಳವನ್ನು ಪರಿಶೀಲಿಸಲು ಮತ್ತು ಘಟನೆಗೆ ಕಾರಣವಾದ ಲೋಪಗಳನ್ನು ನಿರ್ಧರಿಸಲು ಮುಂದಾಗಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ, ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

'ಎಫ್‌ಎಸ್‌ಎಲ್ ತಂಡವು ಪರಿಶೀಲನೆಯ ನಂತರ ಸಲ್ಲಿಸುವ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com