BBMP: ನಗರದ ಕಸ ಸಮಸ್ಯೆ ದೂರಾಗಿಸಲು ಕ್ರಮ; ದೂರು ನೀಡಲು ಪ್ರತ್ಯೇಕ ಕೇಂದ್ರ ಸ್ಥಾಪನೆ; WhatsApp ನಂಬರ್ ನೀಡಿದ ಪಾಲಿಕೆ!

ನಗರದಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಬಿಬಿಎಂಪಿ, ಇದಕ್ಕಾಗಿ ದೂರು ಕೇಂದ್ರ ಸ್ಥಾಪಿಸಿ ಪ್ರತ್ಯೇಕವಾಗಿ ವಾಟ್ಸಪ್ ಸಂಖ್ಯೆಯನ್ನು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಸದಾ ಶ್ರಮವಹಿಸಿತ್ತಾರೆ. ಆದರೂ, ನಗರದಲ್ಲಿನ ಕಸದ ಸಮಸ್ಯೆ ಮಾತ್ರ ದೂರಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರನ್ನು ಹಿಡಿದುಕೊಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ವಾಟ್ಸಪ್ ಸಂಖ್ಯೆಯೊಂದನ್ನು ಜನತೆಗೆ ನೀಡಿದೆ.

ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್‌ಗೆ ಕಳಿಸಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆ ಹೇಳಿದೆ,

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಟಿಪ್ಪರ್ ಗಳ ಮೂಲಕ ಪ್ರತಿನಿತ್ಯ ಮನೆ-ಮನೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಆದರೂ ಕೂಡಾ ನಾಗರಿಕರು ಆಟೋ ಟಿಪ್ಪರ್ ಗಳಿಗೆ ತ್ಯಾಜ್ಯವನ್ನು ನೀಡದೇ ರಾತ್ರಿ ವೇಳೆ ಅಥವಾ ಕೆಲಸಕ್ಕೆ ಹೋಗುವ ಸಮಯದಲ್ಲಿ ರಸ್ತೆ ಬದಿ, ಪಾದಚಾರಿ ಮಾರ್ಗ, ಖಾಲಿ ಸ್ಥಳ ಹಾಗೂ ರಾಜಕಾಲುವೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡಿ ಹೋಗುತ್ತಾರೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ.

ತ್ಯಾಜ್ಯ ಬಿಸಾಡುವುದರ ಜೊತೆಗೆ ಕಟ್ಟಡಗಳ ಭಗ್ನಾವಶೇಷಗಳನ್ನು ಕೂಡಾ ರಸ್ತೆ ಬದಿ, ಖಾಲಿ ಜಾಗದಲ್ಲಿ ಸುರಿದು ಹೋಗುತ್ತಾರೆ. ಅದಲ್ಲದೆ ಅನುಪಯುಕ್ತ ವಸ್ತುಗಳನ್ನು ಕೂಡ ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಾರೆ. ಆದ್ದರಿಂದ ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದನ್ನು ಶಾಶ್ವತವಾಗಿ ತಪ್ಪಿಸಲು ಕ್ರಮ ಕೈಗೊಂಡಿದೆ.

ಸಂಗ್ರಹ ಚಿತ್ರ
ರಸ್ತೆ ಬದಿಗಳಲ್ಲಿ ಅಕ್ರಮವಾಗಿ ಕಸ ಸುರಿಯುತ್ತಿದ್ದ 930 ಕಡೆಗಳಲ್ಲಿ ತೆರವು, ಸ್ವಚ್ಛಗೊಳಿಸಿದ ಬಿಬಿಎಂಪಿ

ನಗರದಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಬಿಬಿಎಂಪಿ, ಇದಕ್ಕಾಗಿ ದೂರು ಕೇಂದ್ರ ಸ್ಥಾಪಿಸಿ ಪ್ರತ್ಯೇಕವಾಗಿ ವಾಟ್ಸಪ್ ಸಂಖ್ಯೆಯನ್ನು ನೀಡಿದೆ. ಜನರು ಸದರಿ ವಾಟ್ಸಪ್ ಸಂಖ್ಯೆಗೆ ಸಂದೇಶದ ಮೂಲಕ ದೂರು ದಾಖಲಿಸಬಹುದಾಗಿದೆ.

ಜನರಪು 9448197197 ಈ ಸಂಖ್ಯೆಗೆ ಛಾಯಾಚಿತ್ರದೊಂದಿಗೆ ಸಂದೇಶ ಕಳುಹಿಸುವ ಮೂಲಕ ದೂರು ದಾಖಲಿಸಬಹುದು. ಆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತ್ಯಾಜ್ಯ/ಕಸ ವಿಲೇವಾರಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com