ಬಾಗಲಕೋಟೆ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳವು: ಪತ್ತೆಹಚ್ಚಿ ಪಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ಆರೋಪಿ ಮಹಿಳೆ ನರ್ಸ್ ಎಂದು ನಟಿಸಿ, ಶಿಶುವಿಗೆ ಉಸಿರಾಟದ ತೊಂದರೆ ಇದೆ ಎಂದು ಹೇಳಿ ನವಜಾತ ಶಿಶುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಹೋಗಿದ್ದಾಳೆ.
The mother, Maboobi, a resident of Bagalkot, had given birth to her child at 7 pm on Friday
ಬಾಗಲಕೋಟೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವಾರ್ಡ್ ನಿಂದ ಇಂದು ಬೆಳಿಗ್ಗೆ ಕಳುವಾಗಿದ್ದ ಶಿಶುವನ್ನು ಐದು ತಾಸುಗಳಲ್ಲಿ ಪತ್ತೆ ಮಾಡಿ ಪಾಲಕರಿಗೆ ಹಸ್ತಾಂತರಿಸಿರುವುದು
Updated on

ಬಾಗಲಕೋಟೆ: ಆಘಾತಕಾರಿ ಘಟನೆಯೊಂದರಲ್ಲಿ, ಬಾಗಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ನವಜಾತ ಶಿಶುವನ್ನು ಕದ್ದೊಯ್ದ ಪ್ರಸಂಗ ನಡೆದಿದ್ದು, ಕೇವಲ 5 ಗಂಟೆಗಳಲ್ಲಿ ಪೊಲೀಸರು ಪತ್ತೆಹಚ್ಚಿ ಪಾಲಕರಿಗೆ ಹಸ್ತಾಂತರಿಸಿದ್ದಾರೆ.

ಆರೋಪಿ ಮಹಿಳೆ ನಿನ್ನೆ ನಸುಕಿನ ಜಾವ 4 ಗಂಟೆ ಸುಮಾರಿಗೆ ನರ್ಸ್ ಎಂದು ನಟಿಸಿ, ಶಿಶುವಿಗೆ ಉಸಿರಾಟದ ತೊಂದರೆ ಇದೆ ಎಂದು ಹೇಳಿ ನವಜಾತ ಶಿಶುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಹೋಗಿದ್ದಾಳೆ.

ಬಾಗಲಕೋಟೆ ನಿವಾಸಿ ತಾಯಿ ಮಾಬೂಬಿ ಶುಕ್ರವಾರ ಸಂಜೆ 7 ಗಂಟೆಗೆ ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ಒಳಗಿನಿಂದ ನವಜಾತ ಶಿಶುವನ್ನು ಕಳೆದುಕೊಂಡು ತೀವ್ರ ದುಃಖಿತರಾಗಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಪೋಷಕರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಹೆಚ್ಚುವರಿ ಎಸ್ಪಿ ಮಹಾಂತೇಶ್ವರ ಜಿಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು. ಶಿಶುವನ್ನು ಕಳುವು ಮಾಡಿದ ಆರೋಪಿತರನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com