ಪ್ರಜ್ವಲ್ ಮತ್ತು ಸಹನಾ
ರಾಜ್ಯ
ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವು
ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ.
ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್ ಒಂದನ್ನು ಮುಗಿಸಿಕೊಂಡು ಕುಣಿಗಲ್ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.
ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ