ಗಟ್ಟಿಮುಟ್ಟಾಗಿದ್ದೇನೆ, ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ: ಪಕ್ಷ ಮುನ್ನಡೆಸಲು ಸಿದ್ಧ; ಹೆಚ್.ಡಿ ಕುಮಾರಸ್ವಾಮಿ

ಕಾಂಗ್ರೆಸ್ಸಿಗರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ಆದರೆ, ನಾನು ಗಟ್ಟಿಮುಟ್ಟಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ, ನಿಮ್ಮ ಜೊತೆ 15-20 ವರ್ಷ ಇರುತ್ತೇನೆ. ಜನತಾದಳವೂ ಇರುತ್ತದೆ.
HD kumaraswamy
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Updated on

ಬೆಂಗಳೂರು: ತಮ್ಮ ಆರೋಗ್ಯದ ಬಗ್ಗೆ ವದಂತಿಗಳನ್ನು ತಳ್ಳಿಹಾಕಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ನಾನು ಗಟ್ಟಿಮುಟ್ಟಾಗಿದ್ದೇನೆ, ಪಕ್ಷ ಮನ್ನಡೆಸಲು ಸಿದ್ಧ ಎಂದು ಭಾನುವಾರ ಹೇಳಿದ್ದಾರೆ.

ಜೆಡಿಎಸ್‌ ರಾಜ್ಯ ಕಚೇರಿ ಜೆ.ಪಿ.ಭವನದ ಆವರಣದಲ್ಲಿ ಭಾನುವಾರ ನಡೆದ ನಿಖಿಲ್ ಕುಮಾರಸ್ವಾಮಿ ನೇತೃತ್ವದ 'ಜನರೊಂದಿಗೆ ಜೆಡಿಎಸ್' ಪಕ್ಷ ಸಂಘಟನಾ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿ ಕುಮಾರಸ್ವಾಮಿಯವರು ಮಾತನಾಡಿದರು.

ಕಾಂಗ್ರೆಸ್ಸಿಗರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ಆದರೆ, ನಾನು ಗಟ್ಟಿಮುಟ್ಟಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ, ನಿಮ್ಮ ಜೊತೆ 15-20 ವರ್ಷ ಇರುತ್ತೇನೆ. ಜನತಾದಳವೂ ಇರುತ್ತದೆ ಎಂದು ಹೇಳಿದರು.

ಮೂರು ಬಾರಿ ಹಾರ್ಟ್ ಆಪರೇಷನ್ ಆಗಿದೆ. ಎರಡು ಬಾರಿ ಸ್ಟೋಕ್ ಆಗಿದೆ. ಆದರೂ ಆರೋಗ್ಯವಾಗಿದ್ದೇನೆ. ಜೆಡಿಎಸ್ ಬಿಟ್ಟು ಬನ್ನಿ ಎನ್ನುವವರಿಗೆ ಸಭೆಯ ಮೂಲಕ ಉತ್ತರ ಕೊಟ್ಟಿದ್ದೀರಿ ಎಂಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ಯಾವುದೇ ಅಪಪ್ರಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಡಿ. ಕೈಲಾಗದವರು ಅಪಪ್ರಚಾರ ಮಾಡುತ್ತಾರೆ. ಅವರಿಗೆಲ್ಲ ದಿಟ್ಟ ಉತರ ಕೊಡೋಣ ಎಂದರು.

HD kumaraswamy
ಕಾಲ್ತುಳಿತ: ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಎಚ್‌.ಡಿ ಕುಮಾರಸ್ವಾಮಿ ಆಗ್ರಹ

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಕುರಿತ ಯಾವುದೇ ಅಪಪ್ರಚಾರಗಳಿಗೆ ವಿಚಲಿತರಾಗದೆ ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಿ, ಕ್ಷೇತ್ರ ಗಟ್ಟಿಮಾಡಿ ಕೊಳ್ಳಿ. ದೆಹಲಿಯಿಂದ ಸೀಟು ತರುವುದು ನನ್ನ ಜವಾಬ್ದಾರಿ.

ಜೆಡಿಎಸ್ ಮುಗಿದೇ ಹೋಯಿತು ಎಂದು ಸಿದ್ದರಾಮಯ್ಯ ಹೇಳುತ್ತಾರಲ್ವಾ? ಜನ ಸೇರಿರುವುದು ನೋಡಿದರೆ ಇಂದೇ ಸಿಕ್ಕಿದಂತಿದೆ. ನಾಲೈದು ಮಂದಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ ಎಂದರು.

ಶ್ವೇತಪತ್ರ ಹೊರಡಿಸಿ

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಯಾದಗಿರಿಯಲ್ಲಿ ಕಲ್ಯಾಣ ಕರ್ನಾಟಕದ ಉದ್ಧಾರ ಮಾಡುತ್ತೇವೆ ಎಂದು ಉದ್ದುದ್ದ ಭಾಷಣ ಮಾಡಿದ್ದಾರೆ. ಹಾಗಾದರೆ ವರ್ಷಗಳ ಅವಧಿಯಲ್ಲಿ ಏನೇನು ಕೆಲಸ ಮಾಡಿದ್ದೀರಿ? ಅಭಿವೃದ್ಧಿ ಕಾರ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದರು.

ಖರ್ಗೆ ಕೊಡುಗೆ ಏನು? ಗುರುಮಿಟ್ಕಲ್ ಜನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶಾಸಕರಾಗಿ, ಮಂತ್ರಿಯಾಗಿ, ಪ್ರತಿಪಕ್ಷನಾಯಕರಾಗಿ ಲೋಕಸಭೆ ನಂತರ ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾಗಿಸಿದ್ದಾರೆ. ಆದರೂ ಕಲ್ಯಾಣ ಕರ್ನಾಟಕ ಇನ್ನೂ ಅಭಿವೃದ್ಧಿ ಆಗಿಲ್ಲ ಯಾಕೆ? ಕಲ್ಯಾಣ ಕರ್ನಾಟಕವನ್ನು ಬೆಂಗಳೂರು, ಮೈಸೂರಿನಂತೆ ಅಭಿವೃದ್ಧಿ ಮಾಡಿ ಎಂದು ಖರ್ಗೆ ಹೇಳಿದ್ದಾರೆ. ಹಾಗಾದರೆ ಇಷ್ಟು ಸುದೀರ್ಘ ಕಾಲ ನೀವು ಮಾಡಿದ್ದೇನು? ಇಷ್ಟು ವರ್ಷ ಬಂದ ಹಣವೆಲ್ಲ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಜಾತಿಗಣತಿ ವರದಿ ಸ್ವೀಕಾರ ಮಾಡುವ ವಿಚಾರದಲ್ಲಿ ಕುಮಾರಸ್ವಾಮಿ ಅಂದಿನ ಸಚಿವ ಪುಟ್ಟರಂಗಶೆಟ್ಟಿಯನ್ನು ಹೆದರಿಸಿದರು ಎಂದು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ. ಜಾತಿ ಗಣತಿ ವರದಿಯನ್ನು ಅಂಗೀಕಾರ ಮಾಡಬೇಡಿ ಎಂದು ನಿಮ್ಮನ್ನು ಯಾರು ಹಿಡಿದು ಕೂತಿದಾರೆ? ಯಾಕೆ ವರದಿ ಜಾರಿ ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com