
ಬೆಂಗಳೂರು: ಚಿನ್ನ ವಂಚನೆಗೆ ಸಂಬಂಧಿಸಿದ ಪಿಎಂಎಲ್ ಎ ಪ್ರಕರಣದಲ್ಲಿ ಐಶ್ವರ್ಯ ಗೌಡ ಅವರಿಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಐಶ್ವರ್ಯ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ, ಇಂದು ಷರತ್ತು ಬದ್ದ ಜಾಮೀನು ನೀಡಿದೆ.
5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶೂರಿಟಿ ನೀಡಬೇಕು. ವಿಳಾಸ ಬದಲಾವಣೆ ಮಾಡಬಾರದು ಮತ್ತು ಬೆಂಗಳೂರು ಬಿಟ್ಟು ಹೋಗಬಾರದು ಎಂದು ಕೋರ್ಟ್ ಆರೋಪಿಗೆ ಷರತ್ತು ವಿಧಿಸಿದೆ.
ಐಶ್ವರ್ಯ ಗೌಡ ಪರ ವಾದ ಮಂಡಿಸಿದ ಎಸ್. ಸುನೀಲ್ ಕುಮಾರ್ ಅವರು, ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಅವರನ್ನು ಬಂಧಿಸಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಹೇಳಿದರು.
ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.
Advertisement