ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ಜೂನ್‌ 25ರಂದು ‘ದೇವನಹಳ್ಳಿ ಚಲೋ’ಗೆ ರೈತ ನಾಯಕರ ಕರೆ

ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ಜೂನ್ 25 ರಂದು ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾದ ಸಂಯುಕ್ತ ಹೋರಾಟ ಸಂಘಟನೆಯಲು 'ದೇವನಹಳ್ಳಿ ಚಲೋ' ಹೋರಾಟಕ್ಕೆ ಸೋಮವಾರ ಕರೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ‘ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿ, ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಈ ಹೋರಾಟದಲ್ಲಿ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಸಂಘಟನೆಗಳು ಪಾಲ್ಗೊಳ್ಳಲಿವೆ. ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕಾಗಿದೆ. ಯಾವುದೇ ಕಾರಣಕ್ಕೂ ನಾವು ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಆದರೂ ಕೆಐಎಡಿಬಿ ಬಲವಂತದಿಂದ ಭೂ ಸ್ವಾಧೀನ ಮಾಡುತ್ತಿದ್ದು, ಭೂಸ್ವಾಧೀನ ಕಾಯ್ದೆ–2013ರ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com