ಚಾಮುಂಡೇಶ್ವರಿ ದರ್ಶನಕ್ಕೆ 2000 ರೂ ವಿಶೇಷ ಟಿಕೆಟ್: ಸರ್ಕಾರದ ವಿರುದ್ಧ ಸ್ಥಳೀಯ ನಿವಾಸಿಗಳ ಕಿಡಿ, ಪ್ರತಿಭಟನೆ

ಚಾಮುಂಡೇಶ್ವರಿ ದೇವಸ್ಥಾನದ ಸೇವಾ ಶುಲ್ಕಗಳನ್ನು ಏಕಾಏಕಿ 300 ರೂ. ನಿಂದ 550 ರೂ ಗೆ ಏರಿಸಿರುವುದು ಖಂಡನೀಯ.
Local residents protesting against the government
ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯ ನಿವಾಸಿಗಳು
Updated on

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜೂನ್‌ 27ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದೆ, ಇದರ ನಡುವೆ ವಿಶೇಷ ದರ್ಶನ’ಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಸ್ಥಳೀಯ ನಿವಾಸಿಗಳು ಕಿಡಿಕಾರಿದ್ದು, ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟದಲ್ಲಿ ಸರಿಯಾಗಿ ಕುಡಿಯುವ ನೀರೇ ಇಲ್ಲ. 5-6 ದಿನಗಳಿಗೊಮ್ಮೆ ಬೆಟ್ಟಕ್ಕೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಅಲ್ಲಿನ ಸ್ಥಳೀಯ ನಿವಾಸಿಗಳು ಪರದಾಡುತ್ತಿದ್ದಾರೆ. ಬಹಳ ವರ್ಷಗಳ ಹಿಂದೆಯೇ ಆರಂಭವಾದ ಪೈಪ್‌ಲೈನ್ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಇದರಿಂದ ಬೆಟ್ಟದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಸರಿಯಾದ ಮೂಲಸೌಕರ್ಯಗಳೇ ಇಲ್ಲ. ಕುಡಿಯುವ ನೀರು, ಶೌಚಗೃಹ, ಸ್ನಾನಗೃಹಗಳಿಲ್ಲ. ಈಗಿರುವ ಒಂದೇ ಶೌಚಗೃಹದಲ್ಲಿ ಮೂತ್ರ, ಮಲ ವಿಸರ್ಜನೆಗೆ 5, 10 ರೂ. ವಸೂಲಿ ಮಾಡಲಾಗುತ್ತಿದೆ. ಇದನ್ನು ಉಚಿತ ಮಾಡಬೇಕು. ಆಷಾಢದಲ್ಲಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವುದರಿಂದ ಕೂಡಲೇ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಚಾಮುಂಡೇಶ್ವರಿ ದೇವಸ್ಥಾನದ ಸೇವಾ ಶುಲ್ಕಗಳನ್ನು ಏಕಾಏಕಿ 300 ರೂ. ನಿಂದ 550 ರೂ.ಗೆ ಏರಿಸಿರುವುದು ಖಂಡನೀಯ. ಭಕ್ತಾದಿಗಳ ಧಾರ್ಮಿಕ ಆಚರಣೆ ಮೇಲೆ ಕಣ್ಣಿಟ್ಟು, ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಹೊರಟಿರುವುದು ದುರಾದೃಷ್ಟಕರ ಸಂಗತಿ.

ಈ ವರ್ಷ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ಮಾಡಿರುವುದು ಖಂಡನೀಯ. ಸಾರ್ವಜನಿಕರಿಂದ ಹಣವನ್ನು ಹಗಲು ದರೋಡೆ ಮಾಡಲು ಹೊರಟಿದೆ. ದೇವರ ದರ್ಶನಕ್ಕೆ ಸರ್ಕಾರ ಇಷ್ಟೊಂದು ದುಬಾರಿ ಟಿಕೆಟ್ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಸರ್ಕಾರ ಜನರಿಗೆ ಒಂದು ಕೈಯಲ್ಲಿ ಕೊಟ್ಟು ದೇವರ ಹೆಸರಿನಲ್ಲಿ ಇನ್ನೊಂದು ಕೈಯಿಂದ ಕಿತ್ತುಕೊಳ್ಳುತ್ತಿದೆ. ಕೂಡಲೇ 2000 ರೂ. ದುಬಾರಿ ಟಿಕೆಟ್ ರದ್ದುಗೊಳಿಸಬೇಕು. ಸೇವಾಶುಲ್ಕವನ್ನು ಯಥಾ ಸ್ಥಿತಿಗೆ ತರಬೇಕು ಎಂದು ಒತ್ತಾಯಿಸಿದರು.

Local residents protesting against the government
ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದರ್ಶನಕ್ಕೆ 2000 ರೂ ವಿಶೇಷ ಟಿಕೆಟ್; ಸರ್ಕಾರದ ವಿರುದ್ಧ BJP ವಾಗ್ದಾಳಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com